ನವದೆಹಲಿ:ದೇಶದ ಹಲವೆಡೆ ಸಿಲುಕಿರುವ ವಲಸೆ ಕಾರ್ಮಿಕರಿಗೆ ವಾಹನಗಳ ಸೌಲಭ್ಯದ ಜೊತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ವಕೀಲ ದೀಪಕ್ ಪ್ರಕಾಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ‘ಸೌಲಭ್ಯಗಳಿಲ್ಲದೇ ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ನ್ಯಾಯಾಲಯ ತಕ್ಷಣ ಮಧ್ಯ ಪ್ರವೇಶಿಸಬೇಕು’ ಎಂದು ಅವರು ಕೋರಿದ್ದಾರೆ.

‘ಕೆಲವು ರಾಜ್ಯಗಳ ಅಧಿಕಾರಿಗಳಲ್ಲಿ ಸಮನ್ವಯದ ತೀವ್ರ ಕೊರತೆಯಿರುವುದರಿಂದ ಸಂಕಷ್ಟಕ್ಕೆ ಈಡಾಗಿರುವ ಕಾರ್ಮಿಕರಿಗೆ ಪರಿಹಾರ ದೊರಕಿಸುವುದು ಸಾಧ್ಯವಾಗಿಲ್ಲ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.