ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್ ಅವರ ವಜಾ ಕೋರಿ ದೆಹಲಿ ಹೈಕೋರ್ಟ್‌ಗೆ ಮನವಿ

Published 22 ಮಾರ್ಚ್ 2024, 11:41 IST
Last Updated 22 ಮಾರ್ಚ್ 2024, 11:41 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಅರವಿಂದ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವಂತೆ ಕೋರಿ, ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಕೆಯಾಗಿದೆ.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ.

ಆಮ್‌ ಅದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಕೇಜ್ರಿವಾಲ್ ಅವರು, ಅಬಕಾರಿ ನೀತಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದರಿಂದ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತ್ತು. ಇದರ ಬೆನ್ನಲ್ಲೇ, ಅವರ ನಿವಾಸಕ್ಕೆ ಭೇಟಿ ನೀಡಿದ ಇ.ಡಿ. ತಂಡ, ಶೋಧ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು.

ಇದರೊಂದಿಗೆ ಕೇಜ್ರಿವಾಲ್‌ ಅವರು, ಸ್ವಾತಂತ್ರ್ಯಾ ನಂತರದಲ್ಲಿ ಅಧಿಕಾರದಲ್ಲಿದ್ದಾಗಲೇ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೊಳಗಾಗಿದ್ದಾರೆ.

ಆದಾಗ್ಯೂ, 'ಕೇಜ್ರಿವಾಲ್‌ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಜೈಲಿನಿಂದಲೇ ಸರ್ಕಾರ ನಡೆಸಲಿದ್ದಾರೆ' ಎಂದು ಎಎಪಿ ಹೇಳಿಕೆ ನೀಡಿದೆ.

ಕೇಜ್ರಿವಾಲ್‌ ಬಂಧನದ ಬೆನ್ನಲ್ಲೇ, ದೆಹಲಿ ಸಚಿವರು, ಎಎಪಿ ನಾಯಕರು ಮತ್ತು ಕಾರ್ಯಕರ್ತರು ಆದಾಯ ತೆರಿಗೆ ಇಲಾಖೆ ಹಾಗೂ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ', ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ. ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ, ವಿರೋಧ ಪಕ್ಷಗಳಿಗೆ ತೊಂದರೆ ನೀಡಲಾರಂಭಿಸಿದೆ ಎಂದು ಗುಡುಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT