ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚ್ಛೇದನ: ಏಕರೂಪ ಕಾಯ್ದೆ ರಚನೆ ಕೋರಿ ಪಿಐಎಲ್‌

ಬಿಜೆಪಿ ಮುಖಂಡ, ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಅವರಿಂದ ‘ಸುಪ್ರೀಂ’ಗೆ ಸಲ್ಲಿಕೆ
Last Updated 16 ಆಗಸ್ಟ್ 2020, 12:11 IST
ಅಕ್ಷರ ಗಾತ್ರ

ನವದೆಹಲಿ: ವಿಚ್ಛೇದನ ಪಡೆಯುವುದಕ್ಕೆ ಸಂಬಂಧಿಸಿ ಈಗ ಬೇರೆ ಬೇರೆ ಕಾಯ್ದೆಗಳಿವೆ. ಎಲ್ಲರಿಗೂ ಅನ್ವಯವಾಗುವಂತೆ ಏಕರೂಪ ಕಾಯ್ದೆ ರಚಿಸಬೇಕು ಎಂದು ಕೋರಿ ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿಕುಮಾರ್‌ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ.

ಈ ಸಂಬಂಧ ಸೂಕ್ತ ಕಾನೂನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅವರು ಕೋರಿದ್ದಾರೆ.

ವಿಚ್ಛೇದನಕ್ಕೆ ಸಂಬಂಧಿಸಿ ಈಗಿರುವ ಕಾಯ್ದೆಯಲ್ಲಿ ಹಲವು ದೋಷಗಳಿವೆ. ಅಲ್ಲದೇ, ವಿಚ್ಛೇದನಕ್ಕೆ ಸಂಬಂಧಿಸಿದ ಕಾಯ್ದೆ ಧರ್ಮ, ಜಾತಿ, ಲಿಂಗ ಅಥವಾ ಜನ್ಮಸ್ಥಳವನ್ನು ಆಧರಿಸಿ ಇರಬಾರದು. ಈ ಅಂಶಗಳನ್ನು ಪರಿಗಣಿಸಿ ಹೊಸ ಕಾಯ್ದೆ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆಯೂ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT