ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ: ಅಮರನಾಥ ಯಾತ್ರೆ ಸ್ಥಗಿತ

ಬಂಡೆ ಉರುಳಿ ಮಹಿಳೆ ಸಾವು
Published 16 ಜುಲೈ 2023, 14:50 IST
Last Updated 16 ಜುಲೈ 2023, 14:50 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರದಲ್ಲಿ ಭಾರಿ ಮಳೆಗೆ ಬಂಡೆ ಉರುಳಿಬಿದ್ದು, ಅಮರನಾಥ ಯಾತ್ರೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮಳೆಯ ಕಾರಣಕ್ಕೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದೂ ಹೇಳಿದ್ದಾರೆ.

ಊರ್ಮಿಳಾ ಬೆನ್‌ (53) ಮೃತಪಟ್ಟವರು. ದಕ್ಷಿಣ ಕಾಶ್ಮೀರದ ಸಂಗಮ ಮತ್ತು ಕೆಳಗಿನ ಗುಹೆಯ ನಡುವೆ ಶನಿವಾರ ಸಂಜೆ ಬಂಡೆ ಉರುಳಿ ಈ ದುರ್ಘಟನೆ ನಡೆದಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. 

ಅಮರನಾಥಕ್ಕೆ ತೆರಳುತ್ತಿದ್ದ ಎಂಟು ಮಂದಿ ಸಿಆರ್‌ಪಿಎಫ್‌ ಯೋಧರು ಗಂಡರ್‌ಬಾಲ್‌ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದೂ ವಿವರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT