ತಿರುವನಂತಪುರ: ರಾಜ್ಯದ ಭತ್ತ ಬೆಳೆಗಾರರಿಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಖಂಡಿಸಿದ್ದಾರೆ.

‘ಅಮೆರಿಕದ ಕೃಷಿ ಉತ್ಪನ್ನಗಳಿಗೆ ದೇಶೀಯ ಮಾರುಕಟ್ಟೆಯನ್ನು ಮುಕ್ತಗೊಳಿಸುವ ಭಾಗವಾಗಿ ಈ ನಿರ್ದೇಶನ ನೀಡಲಾಗಿದೆಯೇ’ ಎಂದು ಅವರು ಇಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

‘ಕೇಂದ್ರದ ಈ ನಿರ್ದೇಶನ ರೈತ ವಿರೋಧಿ. ಉದ್ಯಮಿಗಳು ಬಾಕಿ ಉಳಿಸಿಕೊಂಡಿರುವ ಸಾಲಗಳನ್ನು ರೈಟ್ ಆಫ್ ಮಾಡುವವರಿಗೆ, ರೈತರಿಗೆ ನೀಡುವ ಪ್ರೋತ್ಸಾಹ ಧನ ಹೊರೆಯಾಗಿ ಕಾಣುತ್ತದೆ’ ಎಂದು ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.