ಹಟ್ಟಿ ಚಿನ್ನದ ಗಣಿ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್ ಬ್ಯೂರೊ ಸದಸ್ಯ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಿಪಿಐ(ಎಂ) ನಾಯಕರ ಬಂಧನವನ್ನು ಖಂಡಿಸಿ ಸಿಪಿಎಂ ಲಿಂಗಸುಗೂರು ತಾಲ್ಲೂಕು ಸಮಿತಿಯ ನೇತೃತ್ವದಲ್ಲಿ ಹಟ್ಟಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಕಾರರು ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಲಿಂಗಸುಗೂರು ತಾಲ್ಲೂಕು ಕಾರ್ಯದರ್ಶಿ ರಮೇಶ ವೀರಾಪೂರ, ‘ಪಿಣರಾಯಿ ವಿಜಯನ್ ಅವರ ನಿವಾಸದ ಮೇಲಿನ ಇಡಿ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮವಾಗಿದೆ. ಎಕ್ಸಲಾಜಿಕ್ ಪ್ರಕರಣಕ್ಕೆ ಅವರಿಗೆ ಯಾವುದೇ ಸಂಬಂಧ ಇಲ್ಲವೆಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಅವರನ್ನು ನಿರಂತರವಾಗಿ ಗುರಿಯಾಗಿಸಲಾಗುತ್ತಿದೆ. ಇದು ಖಂಡನೀಯವಾಗಿದೆ’ ಎಂದರು.

ದೆಹಲಿ ಇಡಿ ಕಚೇರಿ ಎದುರು ನಡೆದ ಪ್ರತಿಭಟನೆಯ ವೇಳೆ ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಹಿರಿಯ ನಾಯಕಿ ಬೃಂದಾ ಕಾರಟ್, ಪಾಲಿಟ್ ಬ್ಯೂರೋ ಸದಸ್ಯರಾದ ಅಶೋಕ್ ಧವಳೆ, ಮರಿಯಂ ಧವಳೆ ಹಾಗೂ ವಿಜೂ ಕೃಷ್ಣನ್, ಕೇಂದ್ರ ಸಮಿತಿ ಸದಸ್ಯ ವಿಕ್ರಂ ಸಿಂಗ್ ಮತ್ತು ದೆಹಲಿ ರಾಜ್ಯ ಕಾರ್ಯದರ್ಶಿ ಅನುರಾಗ್ ಸಕ್ಸೇನಾ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ನೂರಕ್ಕೂ ಹೆಚ್ಚು ಪ್ರತಿಭಟನಕಾರರನ್ನು ಬಂಧಿಸಿರುವುದನ್ನು ನಮ್ಮ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ’ ಎಂದರು.

ಕಾರ್ಮಿಕ ಮುಖಂಡ ಮೈನುದ್ದೀನ್ ಮಾತನಾಡಿದರು.

ಈ ವೇಳೆ ಸಿಪಿಎಂ ಮುಖಂಡರಾದ ವೆಂಕೋಬ್ ಮೀಯ್ಯಾಪೂರು, ಶಾಂತಕುಮಾರಿ, ಪೆಂಚಲಯ್ಯ, ಸಾಹೀರಾ ಬಾನು, ನಿಂಗಪ್ಪ, ದುರುಗಮ್ಮ, ರಮೇಶ ಬಾಬು, ಶಾಂತಪ್ಪ ಆನ್ವರಿ ಮಹಮ್ಮದ್ ಹನೀಫ್, ಸೋಮಣ್ಣ, ಅಮರೇಶ ಗುರಿಕಾರ, ಗುಂಡಪ್ಪಗೌಡ ಗುರಿಕಾರ ವೆಂಕಟೇಶ ಕೋರಕಲ್, ಹಾಜಿಬಾಬು, ಅಲ್ಲಾಭಕ್ಷ, ಖಾಜಾ ಟೈಲ್ಸ್, ರಫಿ ಮಲ್ಲಾಪೂರು, ಬಸವರಾಜ್ ನಗನೂರು, ರಮೇಶ್ ಜೆ, ಮೌನೇಶ ಕಡ್ಡೋಣಿ, ಚಂದ್ರಶೇಖರ್ ನೆಲೋಗಿ, ವೆಂಕಟೇಶ ಚಿಕ್ಕನಗನೂರು, ದಾವೂದ್, ರಸೂಲ್, ಮಹಾಂತೇಶ್ ಸೇರಿದಂತೆ ಕಾರ್ಯಕರ್ತರು ಹಾಗೂ ಪಕ್ಷದ ಬೆಂಬಲಿಗರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-32-1223610074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.