ನವದೆಹಲಿ: ಸಿವಿಲ್ ಕೋರ್ಟ್ ನ್ಯಾಯಮೂರ್ತಿ (ಜೂನಿಯರ್ ಡಿವಿಜನ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಕೀಲಿ ವೃತ್ತಿ ಅನುಭವ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮೇ 20ರಂದು ನೀಡಿದ್ದ ತೀರ್ಪನ್ನು ಮರು ಪರಿಶೀಲನೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ವಕೀಲ ಚಂದ್ರಸೇನ್ ಯಾದವ್ ಎಂಬವರು ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮೇ 20ರಂದು ನೀಡಿದ್ದ ಆದೇಶದಲ್ಲಿ ಸಿವಿಲ್ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷ ವಕೀಲಿ ವೃತ್ತಿ ಮಾಡಿದ ಅನುಭವ ಹೊಂದಿರಬೇಕು ಎಂದು ಎಲ್ಲ ಹೈಕೋರ್ಟ್ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.

‘ಮೂರು ವರ್ಷಗಳ ವಕೀಲಿ ವೃತ್ತಿ ಕಡ್ಡಾಯ’ ಎಂಬ ಆದೇಶದ ಮೂಲಕ ಸಂವಿಧಾನದ 14 ಮತ್ತು 16ನೇ ವಿಧಿಯಡಿ ನೀಡಿರುವ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ಸೇವೆಯಲ್ಲಿ ಸಮಾನ ಮತ್ತು ನ್ಯಾಯಯುತ ಅವಕಾಶದ ಮೇಲೂ ಈ ಆದೇಶ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದರಿಂದ ಸುಪ್ರೀಂ ಕೋರ್ಟ್ ಈ ಆದೇಶವನ್ನು ಪುನರ್ ಪರಿಶೀಲಿಸಬೇಕು ಎಂದು ಚಂದ್ರಸೇನ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.