ನವದೆಹಲಿ: ಕೋವಿಡ್–19 ವಿರುದ್ಧದ ಹೋರಾಟಕ್ಕೆ ನೆರವಾಗುವ ದೃಷ್ಟಿಯಿಂದ ಆರಂಭಿಸಿರುವ ‘ಪಿಎಂ ಕೇರ್ಸ್ ಫಂಡ್’ಅನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಗೆ ಸೇರಿಸಬೇಕು ಎಂಬ ಅರ್ಜಿಗೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಬುಧವಾರ ಆಕ್ಷೇಪ ವ್ಯಕ್ತಪಡಿಸಿತು.

ಸಮ್ಯಕ್ ಗಂಗ್ವಾಲ್ ಎಂಬುವವರು ಈ ಸಂಬಂಧ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಪಿಎಂ ಕೇರ್ಸ್ ಫಂಡ್‌ಗೆ ಸಂಬಂಧಿಸಿ ದಾಖಲೆಗಳನ್ನು ಒದಗಿಸಲು ನಿರಾಕರಿಸಿ ಪಿಎಂಒದ ಸಾರ್ವಜನಿಕ ಮಾಹಿತಿ ಅಧಿಕಾರಿ ಜೂನ್ 2ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಈ ಅರ್ಜಿ ಸಮರ್ಥನೀಯವೇ ಅಲ್ಲ. ಅಲ್ಲದೇ, ಈ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲವೇಕೆ ಎಂಬ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲಾಗುವುದು’ ಎಂದರು.

ನಂತರ, ನ್ಯಾಯಮೂರ್ತಿ ನವೀನ್ ಚಾವ್ಲಾ ಅವರು ವಿಚಾರಣೆಯನ್ನು ಆಗಸ್ಟ್ 28ಕ್ಕೆ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.