ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆಗೆ ಸಂಚು ರೂಪಿಸಿದ್ದ ಆರೋಪದ ಮೇರೆಗೆ ನವಿ ಮುಂಬೈ ಪೊಲೀಸರು ಬಿಷ್ಣೋಯ್ ಗ್ಯಾಂಗ್ನ ಸದಸ್ಯ ಸುಖ ಅಲಿಯಾಸ್ ಸುಖಬೀರ್ ಬಲ್ಬೀರ್ ಸಿಂಗ್ ಅನ್ನು ಬಂಧಿಸಿದ್ದಾರೆ.

ಹರಿಯಾಣದ ಪಾಣಿಪತ್ನಿಂದ ಸುಖಬೀರ್ ಅನ್ನು ಬುಧವಾರ ಬಂಧಿಸಲಾಗಿದೆ. ಆರೋಪಿಯನ್ನು ನವಿ ಮುಂಬೈಗೆ ಕರೆ ತಂದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಗುರುವಾರ ಪೊಲೀಸರು ಹೇಳಿದ್ದಾರೆ.

ಸಲ್ಮಾನ್ಖಾನ್ ಕೊಲ್ಲಲು ಬಿಷ್ಣೋಯ್ ಗ್ಯಾಂಗ್ನ ಸದಸ್ಯರಿಗೆ ಸುಪಾರಿ ನೀಡಲಾಗಿತ್ತು ಎಂಬ ಆರೋಪವಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ನೆಲೆಸಿರುವ ಶಸ್ತ್ರಾಸ್ತ್ರ ಪೂರೈಕೆದಾರ ಡೋಗರ್ ಜತೆ ಸುಖಬೀರ್ ಸಿಂಗ್ ಸಂಪರ್ಕದಲ್ಲಿದ್ದ. ಸಿಂಗ್ ಮತ್ತು ಬಿಷ್ಣೋಯ್ ಗ್ಯಾಂಗ್ ಸದಸ್ಯರು ಎಕೆ–47, ಎಂ16 ಮತ್ತು ಎಕೆ92 ರೀತಿಯ ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನದಿಂದ ಪಡೆದು, ಸಲ್ಮಾನ್ ಹತ್ಯೆಗೆ ಸಂಚು ರೂಪಿಸಲು ಯೋಜಿಸಿದ್ದರು ಎಂದು ಅಧಿಕಾರಿ ವಿವರಿಸಿದ್ದಾರೆ.

ಎನ್ಸಿಪಿ ನಾಯಕ ಮತ್ತು ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವಿ ಮುಂಬೈ ಪೊಲೀಸರು ಸುಖಬೀರ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಈ ವರ್ಷದ ಏಪ್ರಿಲ್ 24ರಂದು ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದಕ್ಕಾಗಿ ಪೊಲೀಸರು 18 ಆರೋಪಿಗಳು ಮತ್ತು ಬಿಷ್ಣೋಯ್ ಗ್ಯಾಂಗ್ನ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.