ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ: ಜೈರಾಮ್

Published 1 ಜುಲೈ 2024, 3:26 IST
Last Updated 1 ಜುಲೈ 2024, 3:26 IST
ಅಕ್ಷರ ಗಾತ್ರ

ನವದೆಹಲಿ: ಒಂದು ವರ್ಷ ಕಳೆದರೂ ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿ ಅವರಿಗೆ ಇನ್ನೂ ಸಮಯ ಸಿಕ್ಕಿಲ್ಲ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಕಳೆದ ವರ್ಷ ಇದೇ ಸಮಯದಲ್ಲಿ ಮಣಿಪುರದ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಅವರ ರಾಜೀನಾಮೆ ಸುತ್ತ ನಡೆದ ನಾಟಕೀಯ ಬೆಳವಣಿಗೆ ವಿರುದ್ಧ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಆವರು, ‘ಒಂದು ವರ್ಷ ಕಳೆದರೂ ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಸಂಕಷ್ಟಕ್ಕೀಡಾಗಿರುವ ಸಮುದಾಯಗಳ ಕುರಿತು ಚುನಾಯಿತ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಿಲ್ಲ ಏಕೆ’ ಎಂದು ಜೈರಾಮ್ ಪ್ರಶ್ನಿಸಿದ್ದಾರೆ.

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಭುಗಿಲೆದ್ದ ವೇಳೆ ಬಿರೇನ್‌ ಸಿಂಗ್‌ ಅವರ ರಾಜೀನಾಮೆ ಸಲ್ಲಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅವರ ಬೆಂಬಲಿಗರು ರಾಜೀನಾಮೆ ನೀಡುವುದನ್ನು ತಡೆದಿದ್ದರು. ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದರು. ಈ ಚಿತ್ರಗಳನ್ನು ಜೈರಾಮ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ನಡೆದ ಜನಾಂಗೀಯ ಘರ್ಷಣೆಯಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT