ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌರವಿದ್ಯುತ್ ಬಳಕೆಗೆ ಉತ್ತೇಜನ: ‘ಪಿಎಂ ಸೂರ್ಯ ಘರ್’ ಯೋಜನೆಗೆ ಚಾಲನೆ

Published 13 ಫೆಬ್ರುವರಿ 2024, 11:41 IST
Last Updated 13 ಫೆಬ್ರುವರಿ 2024, 11:41 IST
ಅಕ್ಷರ ಗಾತ್ರ

ನವದೆಹಲಿ: ಸೌರವಿದ್ಯುತ್ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪಿಎಂ ಸೂರ್ಯ ಘರ್: ಮುಫ್ತ್‌ ಬಿಜ್ಲಿ ಯೋಜನಾ’ ಆರಂಭಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿಳಿಸಿದ್ದಾರೆ. ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ತಲಾ 300 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವ ಗುರಿಯನ್ನು ಈ ಯೋಜನೆಯು ಹೊಂದಿದೆ.

ಈ ಯೋಜನೆಗಾಗಿ ಒಟ್ಟು ₹75 ಸಾವಿರ ಕೋಟಿಗಿಂತ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ. ‘ಸುಸ್ಥಿರ ಅಭಿವೃದ್ಧಿ ಹಾಗೂ ಜನರ ಹಿತದ ದೃಷ್ಟಿಯಿಂದ ನಾವು ಈ ಯೋಜನೆಯನ್ನು ಆರಂಭಿಸುತ್ತಿದ್ದೇವೆ. ಈ ಯೋಜನೆಯು 1 ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಉದ್ದೇಶ ಹೊಂದಿದೆ’ ಎಂದು ಪ್ರಧಾನಿಯವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದಿದ್ದಾರೆ.

ಗಣನೀಯ ಪ್ರಮಾಣದ ಸಬ್ಸಿಡಿಯನ್ನು ಇದು ಒಳಗೊಂಡಿದೆ. ಸಬ್ಸಿಡಿ ಮೊತ್ತವನ್ನು ಯೋಜನೆಗೆ ಸೇರುವವರ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಬ್ಯಾಂಕ್‌ ಸಾಲವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಈ ಮೂಲಕ ಜನರ ಮೇಲೆ ವೆಚ್ಚದ ಹೊರೆ ಬೀಳದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

ಈ ಯೋಜನೆಯನ್ನು ತಳಮಟ್ಟದಲ್ಲಿ ಜನಪ್ರಿಯಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಪಂಚಾಯಿತಿಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಈ ಯೋಜನೆಯು ಜನರ ಆದಾಯ ಹೆಚ್ಚಿಸುತ್ತದೆ, ವಿದ್ಯುತ್ ಬಿಲ್ ಮೊತ್ತವನ್ನು ತಗ್ಗಿಸುತ್ತದೆ ಹಾಗೂ ಉದ್ಯೋಗ ಸೃಷ್ಟಿಸುತ್ತದೆ ಎಂದಿದ್ದಾರೆ.

pmsuryaghar.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಯೋಜನೆಯ ಅಡಿ ಅರ್ಜಿ ಸಲ್ಲಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT