ವಯನಾಡ್(ಕೇರಳ): ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು(ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಚೂರಲ್‌ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳಲ್ಲಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು.
ಸಮೀಕ್ಷೆ ವೇಳೆ ಪ್ರಧಾನಿ ಅವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಇದ್ದರು.