ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಭೀತಿ: ಪ್ರಧಾನಿ ನರೇಂದ್ರ ಮೋದಿ ಬ್ರಸೆಲ್ಸ್ ಭೇಟಿ ಮುಂದೂಡಿಕೆ

Last Updated 5 ಮಾರ್ಚ್ 2020, 12:26 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಬ್ರಸೆಲ್ಸ್ ಭೇಟಿಯು ರದ್ದಾಗಿದ್ದು, ಮರು ನಿಗದಿಪಡಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.

ಭಾರತ –ಯುರೋಪ್ ಒಕ್ಕೂಟ ಶೃಂಗಸಭೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕೋವಿಡ್ -19 ಕಾರಣದಿಂದಾಗಿ ಉಭಯ ದೇಶಗಳಪ್ರತಿನಿಧಿಗಳು ಪ್ರವಾಸ ಕೈಗೊಳ್ಳಬಾರದು ಎಂದು ನಿರ್ಧರಿಸಲಾಗಿದೆ ಎಂದು ಹೇಳಿದರು.

ಭಾರತ-ಇಯು ಶೃಂಗಸಭೆ ಮಾರ್ಚ್ 13 ರಂದು ಬ್ರಸೆಲ್ಸ್‌ನಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಬುಧವಾರ, ಬ್ರಸೆಲ್ಸ್‌ನಿಂದ ಹತ್ತು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಬೆಲ್ಜಿಯಂನಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಶೃಂಗಸಭೆಯನ್ನು ಪರಸ್ಪರ ಅನುಕೂಲಕರ ದಿನಾಂಕಕ್ಕೆ ಮತ್ತೆ ನಿಗದಿಪಡಿಸಲಾಗುವುದು ಎಂದು ವಿದೇಶಾಂಗ ವಕ್ತಾರರು ತಿಳಿಸಿದ್ದಾರೆ.

ಜಾಗತಿಕ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಬದ್ಧತೆ ತೋರುವ ಸಲುವಾಗಿ ಇಯು ಮತ್ತು ಭಾರತದ ನಡುವಿನ ನಿಕಟ ಸಹಕಾರದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಏಕಾಏಕಿ ಕಾಣಿಸಿಕೊಂಡಿರುವ ಕೋವಿಡ್ -19 ಬಿಕ್ಕಟ್ಟು ಶೀಘ್ರದಲ್ಲೇ ಕಡಿಮೆಯಾಗಲಿದೆ ಎಂದು ಭಾವಿಸುತ್ತೇವೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ.

ಆದಾಗ್ಯೂ, ಪ್ರಧಾನಿ ಮೋದಿಯವರ ಬಾಂಗ್ಲಾದೇಶ ಭೇಟಿ ನಿಗದಿಯಂತೆ ನಡೆಯಲಿದೆ ಮತ್ತು ಅದರ ವಿವರಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT