ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ಶಮನದ ನಿಟ್ಟಿನಲ್ಲಿ ಮಾಡಿಕೊಂಡಿರುವ ಕದನ ವಿರಾಮ ಒಪ್ಪಂದದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಸೇನಾಪಡೆಗಳ ಮುಖ್ಯಸ್ಥ ಲೆ. ಜನರಲ್ ಅನಿಲ್ ಚೌಹಾಣ್ ಹಾಗೂ ಮೂರು ಸೇನಾ ಪಡೆಗಳ ಮುಖ್ಯಸ್ಥರು ಭಾಗವಹಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.

ಅದರ ಬೆನ್ನಲ್ಲೇ, ಪಾಕಿಸ್ತಾನ ಸೇನೆ ಭಾರತದ ನಾಗರಿಕರು ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್ ಹಾಗೂ ಕ್ಷಿಪಣಿ ದಾಳಿ ನಡೆಸಿತ್ತು. ಆ ಪ್ರಯತ್ನಗಳನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸಿತ್ತು. ಇದರಿಂದಾಗಿ, ಉಭಯ ರಾಷ್ಟ್ರಗಳ ನಡುವೆ ಯುದ್ಧದ ಆತಂಕ ಸೃಷ್ಟಿಯಾಗಿತ್ತು.

ಶನಿವಾರ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಸಮತ್ತಿ ಸೂಚಿಸಿದ್ದವು. ಆದರೆ, ಕೆಲವೇ ಹೊತ್ತಿನ ಬಳಿಕ ಪಾಕ್ ಸೇನೆ ಭಾರತದತ್ತ ಮತ್ತೆ ದಾಳಿ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೂ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಕದನ ವಿರಾಮ ಒಪ್ಪಂದದ ಪರಿಣಾಮ, ಪಾಕ್ ಸೇನೆ ಕದನ ವಿರಾಮ ಉಲ್ಲಂಘಿನೆ ಹಾಗೂ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಚರ್ಚೆ ನಡೆಯಾಗುವ ಸಾಧ್ಯತೆ ಇದೆ.
.Indo-Pak Tension: ಭಾರತ– ಪಾಕ್ ಕದನ ವಿರಾಮ.ಭಾರತ ಸೇನಾ ನೆಲೆ ಮೇಲೆ ಗುಂಡು: ಕದನ ವಿರಾಮ ಉಲ್ಲಂಘಿಸಿದ ಪಾಕ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.