ಅಹಮದಾಬಾದ್: ದೇಶದಲ್ಲಿ ಮಾನವ –ಪ್ರಾಣಿ ಸಂಘರ್ಷ ನಿಯಂತ್ರಣಕ್ಕಾಗಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಉನ್ನತ ಅಧ್ಯಯನ ಕೇಂದ್ರವನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ವಿಶ್ವ ವನ್ಯಜೀವಿ ದಿನದ ಅಂಗವಾಗಿ ಗಿರ್ ರಾಷ್ಟ್ರೀಯ ಉದ್ಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಏಳನೇ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರೂ ಸಭೆಯಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ ಮೋದಿ ಅವರು ದೇಶದ ಮೊಟ್ಟಮೊದಲ ಡಾಲ್ಫಿನ್ಗಳ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿದ್ದಾರೆ. ದೇಶದಾದ್ಯಂತ ಒಟ್ಟು 6,327 ಡಾಲ್ಫಿನ್ಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2024ರ ಅಕ್ಟೋಬರ್ನಲ್ಲಿ ‘ಪ್ರಾಜೆಕ್ಟ್ ಡಾಲ್ಫಿನ್’ ಯೋಜನೆಯಡಿಯಲ್ಲಿ ಗಂಗಾ, ಬ್ರಹ್ಮಪುತ್ರ ಮತ್ತು ಸಿಂಧೂ ನದಿಗಳ 8,000 ಕಿ.ಮೀ ವ್ಯಾಪ್ತಿಯಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಇದು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ನಡೆದ ಡಾಲ್ಫಿನ್ಗಳ ಸಮೀಕ್ಷೆಯಾಗಿದೆ.

ಎಂಟು ರಾಜ್ಯಗಳಾದ್ಯಂತ 28 ನದಿಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಡಾಲ್ಫಿನ್ಗಳು ಕಂಡುಬಂದಿವೆ. ಉಳಿದಂತೆ ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲೂ ಹೆಚ್ಚಿನ ಸಂಖ್ಯೆಯ ಡಾಲ್ಫಿನ್ಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.