ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿಗೆ ಆಂಧ್ರಪ್ರದೇಶಕ್ಕೆ ಬರುವ ಅರ್ಹತೆಯಿಲ್ಲ: ವೈ.ಎಸ್‌.ಶರ್ಮಿಳಾ

Published 8 ಮೇ 2024, 15:29 IST
Last Updated 8 ಮೇ 2024, 15:29 IST
ಅಕ್ಷರ ಗಾತ್ರ

ಕಡಪ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಿಂದ ಆಂಧ್ರಪ್ರದೇಶಕ್ಕೆ ಮೋಸ ಮಾಡಿರುವುದರಿಂದ ರಾಜ್ಯಕ್ಕೆ ಬರಲು ಅವರಿಗೆ ಅರ್ಹತೆ ಇಲ್ಲ ಎಂದು ಆಂಧ್ರಪ್ರದೇಶದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಬುಧವಾರ ಹೇಳಿದ್ದಾರೆ.

‘ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಯುತ್ತಿರುವುದರಿಂದ ಪ್ರಧಾನಿ ಆಂಧ್ರದ ಬಗ್ಗೆ ‘ಮೊಸಳೆ ಕಣ್ಣೀರು’ ಸುರಿಸುತ್ತಿದ್ದಾರೆ’ ಎಂದು ಟೀಕಿಸಿದ ಅವರು, ‘ನೀವು ಮೊದಲು ರಾಜ್ಯದ ಜನರ ಕ್ಷಮೆ ಕೇಳಿ’ ಎಂದರು. 

ಪತ್ರಿಕಾ ಗೋಷ್ಠಿಯಲ್ಲಿ ರೇಡಿಯೊ ಪ್ರದರ್ಶಿಸಿದ ಅವರು, ‘ರಾಜ್ಯದ ಜನರ ‘ಮನ್‌ ಕಿ ಬಾತ್’ ಕೇಳಿಸಿಕೊಳ್ಳಲು ನಾನು ಇದನ್ನು ಕೊಡುಗೆಯನ್ನಾಗಿ ನೀಡುತ್ತಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT