ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಶುಭ ಕೋರಿದ ಪ್ರಧಾನಿ ಮೋದಿ

Last Updated 10 ಮಾರ್ಚ್ 2023, 2:56 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌) ನಮ್ಮ ಭದ್ರತಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವನ್ನು ಹೊಂದಿದ್ದು, ಅದರ ಎಲ್ಲ ಯೋಧರಿಗೆ ಸಂಸ್ಥಾಪನಾ ದಿನದ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.


ಈ ಕುರಿತು ಟ್ವೀಟ್‌ ಮಾಡಿರುವ ಮೋದಿ, ಸಿಐಎಸ್‌ಎಫ್‌ ನಿರ್ಣಾಯಕ ಮತ್ತು ಕಾರ್ಯತಂತ್ರದ ಮೂಲಸೌಕರ್ಯ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಒದಗಿಸುತ್ತದೆ. ಈ ಪಡೆ ತನ್ನ ಕಠಿಣ ಪರಿಶ್ರಮ ಮತ್ತು ವೃತ್ತಿಪರ ದೃಷ್ಟಿಕೋನಕ್ಕೆ ಹೆಸರುವಾಸಿಯಾಗಿದೆ ಎಂದಿದ್ದಾರೆ.


ಸಿಐಎಸ್‌ಎಫ್‌ ಯೋಧರು ದೇಶದ ಹಲವೆಡೆ ಸೇವೆ ಸಲ್ಲಿಸುತ್ತಿರುವ ಚಿತ್ರಗಳನ್ನು ಮೋದಿ ಹಂಚಿಕೊಂಡಿದ್ದಾರೆ. ರೈಲ್ವೆ ನಿಲ್ದಾಣ, ಜಮ್ಮು ಮತ್ತು ಕಾಶ್ಮೀರ, ಗುಜರಾತ್‌ನ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ಪ್ರತಿಮೆ ಬಳಿ ಕಾರ್ಯನಿರತ ಸಿಐಎಸ್‌ಎಫ್‌ ಸಿಬ್ಬಂದಿ ಚಿತ್ರವನ್ನು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.


1969ರ ಮಾ.10ರಂದು ಸಿಐಎಸ್‌ಎಫ್‌ ಸ್ಥಾಪನೆಗೊಂಡಿತ್ತು. ಹೀಗಾಗಿ ಪ್ರತಿ ವರ್ಷ ಮಾ.10ರಂದು ಸಿಐಎಸ್‌ಫ್‌ ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತದೆ. ಕೇಂದ್ರದ ಪ್ರಮುಖ 5 ಭದ್ರತಾ ಪಡೆಗಳಲ್ಲಿ ಸಿಐಎಸ್‌ಎಫ್‌ ಒಂದಾಗಿದೆ. ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ ಸ್ಥಳಗಳ ಭದ್ರತೆ ಹೊಣೆ ಈ ಪಡೆಯ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT