ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: 9ನೇ ಬಾರಿ ಮುಖ್ಯಮಂತ್ರಿಯಾದ ನಿತೀಶ್‌ ಕುಮಾರ್‌ಗೆ ಪ್ರಧಾನಿ ಮೋದಿ ಅಭಿನಂದನೆ

Published 28 ಜನವರಿ 2024, 15:35 IST
Last Updated 28 ಜನವರಿ 2024, 15:35 IST
ಅಕ್ಷರ ಗಾತ್ರ

ನವದೆಹಲಿ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು ಬಿಜೆಪಿ ಜತೆಗೂಡಿ ಭಾನುವಾರ ಸಂಜೆ 9 ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿ ನಾಯಕರಾದ ಸಾಮ್ರಾಟ್‌ ಚೌಧರಿ, ವಿಜಯ್‌ ಸಿನ್ಹಾ ಅವರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಡಿಎಗೆ ಮರಳಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಅಭಿನಂಧಿಸಿದ್ದಾರೆ. 

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪೋಸ್ಟ್‌ ಹಂಚಿಕೊಂಡಿದ್ದು,  ‘ಬಿಹಾರದಲ್ಲಿ ರಚನೆಯಾದ ಎನ್‌ಡಿಎ ಸರ್ಕಾರವು ರಾಜ್ಯದ ಅಭಿವೃದ್ಧಿ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲಿದೆ ಎಂದಿದ್ದಾರೆ.

ಮುಖ್ಯಮಂತ್ರಿಯಾಗಿರುವ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಸಿನ್ಹಾ ಅವರನ್ನು ಅಭಿನಂದಿಸುತ್ತೇನೆ. ಈ ತಂಡವು ರಾಜ್ಯದ ಜನರಿಗೆ ಸಂಪೂರ್ಣ ಸಮರ್ಪಣಾಭಾವದಿಂದ ಸೇವೆ ಸಲ್ಲಿಸುತ್ತದೆ ಎಂಬ ವಿಶ್ವಾಸ ನನಗಿದೆ’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ದಶಕದಲ್ಲಿ ನಿತೀಶ್‌ ಅವರು ಐದನೇ ಬಾರಿಗೆ ರಾಜಕೀಯ ಮಗ್ಗಲು ಬದಲಿಸಿದಂತಾಗಿದೆ. 2022ರಲ್ಲಿ ಎನ್‌ಡಿಎ ಮೈತ್ರಿಯಲ್ಲಿದ್ದ ಅವರು, ಅದೇ ವೇಳೆ ಎನ್‌ಡಿಎ ತೊರೆದು, ಆರ್‌ಜೆಡಿ, ಕಾಂಗ್ರೆಸ್‌ ಜತೆಗೂಡಿ ‘ಮಹಾಘಟಬಂಧನ್‌’ ಸರ್ಕಾರ ರಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT