ರಾಷ್ಟ್ರಪತಿಗೆ ಅವಮಾನ: ಮೋದಿ ಖಂಡನೆ
ರಾಷ್ಟ್ರಪತಿ ಅವರು ಪಶ್ಚಿಮ ಬಂಗಾಳಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ವೇಳೆ ಉಂಟಾಗಿದ್ದ ಶಿಷ್ಟಾಚಾರ ಉಲ್ಲಂಘನೆ ಕುರಿತು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ‘ಆಡಳಿತಾರೂಢ ಟಿಎಂಸಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸುವ ಮೂಲಕ ಎಲ್ಲಾ ಮಿತಿಗಳನ್ನು ದಾಟಿದೆ’ ಎಂದು ಆರೋಪಿಸಿದರು. ‘ಆದಿವಾಸಿ ಸಮುದಾಯದ ಮಗಳು ಅತ್ಯುನ್ನತ ಸ್ಥಾನ ಅಲಂಕರಿಸಿರುವುದು ಟಿಎಂಸಿಗೆ ಸಹಿಸಲು ಆಗುತ್ತಿಲ್ಲ’ ಎಂದ ಅವರು ‘ಸಂವಿಧಾನ ಮತ್ತು ಬಿ.ಆರ್.ಅಂಬೇಡ್ಕರ್ ಅವರಿಗೆ ಟಿಎಂಸಿ ಮಾಡಿದ ಅಪಮಾನವನ್ನು ಪಶ್ಚಿಮ ಬಂಗಾಳದ ಜನರು ಸಹಿಸುವುದಿಲ್ಲ. ಅದಕ್ಕೆ ತಕ್ಕ ಪಾಠ ಕಲಿಸುತ್ತಾರೆ’ ಎಂದರು. ಸಂತಾಲ್ ಬುಡಕಟ್ಟು ಉತ್ಸವದಲ್ಲಿ ಭಾಗವಹಿಸಲು ರಾಷ್ಟ್ರಪತಿಯವರು ರಾಜ್ಯಕ್ಕೆ ಬಂದಿದ್ದ ವೇಳೆ ರಾಜ್ಯ ಸರ್ಕಾರ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಿಸಲಿಲ್ಲ ಎಂದು ಪ್ರಧಾನಿ ದೂರಿದರು.