ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೆರಿಕಗೆ ತೆರಳಿದ ಪ್ರಧಾನಿ ಮೋದಿ: ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

Published : 21 ಸೆಪ್ಟೆಂಬರ್ 2024, 3:29 IST
Last Updated : 21 ಸೆಪ್ಟೆಂಬರ್ 2024, 3:29 IST
ಫಾಲೋ ಮಾಡಿ
Comments

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದರು.

ವಿಲ್ಮಿಂಗ್ಟನ್‌ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಸಹ ಭಾಗವಹಿಸುತ್ತಿದ್ದಾರೆ. ಸಭೆ ಬಳಿಕ ಮೋದಿ ಅವರು, ಜೋ ಬೈಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಅಮೆರಿಕ ಪ್ರವಾಸದ ವೇಳೆ ಕ್ವಾಡ್ ಶೃಂಗಸಭೆ, ಸಮುದಾಯ ಕಾರ್ಯಕ್ರಮ, ಮತ್ತು ಇತರ ದ್ವಿಪಕ್ಷೀಯ ಸಭೆಗಳಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸೆ.22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಹಾಗೂ ಸೆ.23ರಂದು ಅವರು ವಿಶ್ವಸಂಸ್ಥೆಯಲ್ಲಿ ವಿವಿಧ ದೇಶಗಳ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. 

ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಶಾಂತಿ, ಸಮೃದ್ಧಿಗಾಗಿ ಕೆಲಸ ಮಾಡುವ ಪ್ರಮುಖ ಗುಂಪಾಗಿ ಕ್ವಾಡ್ ಹೊರಹೊಮ್ಮಿದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮೋದಿ ಅದ್ಭುತ ವ್ಯಕ್ತಿ. ಅವರು ಅಮೆರಿಕಕ್ಕೆ ಬಂದಾಗ ಅವರನ್ನು ಭೇಟಿಯಾಗುತ್ತೇನೆ ಎಂದು ಟ್ರಂಪ್‌ ಕಳೆದ ಹೇಳಿದ್ದರು. ಈ ಇಬ್ಬರು ನಾಯಕರು ಭೇಟಿಯಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT