ವಂದೇ ಭಾರತ್ ಎಕ್ಸ್‌ಪ್ರೆಸ್ ಈಶಾನ್ಯದಲ್ಲಿ ಪ್ರವಾಸೋದ್ಯಮ, ಶಿಕ್ಷಣ, ವ್ಯಾಪಾರ ಮತ್ತು ಉದ್ಯೋಗಾವಕಾಶಗಳನ್ನು ಉತ್ತೇಜಿಸುತ್ತದೆ. ಗುವಾಹಟಿ ಮತ್ತು ನ್ಯೂ ಜಲಪಾಯ್ ಗುರಿ ನಡುವಿನ ಸೆಮಿ-ಹೈಸ್ಪೀಡ್ ರೈಲು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಕಳೆದ ಒಂಬತ್ತು ವರ್ಷಗಳಲ್ಲಿ, ಈಶಾನ್ಯದ ಎಲ್ಲ ರಾಜ್ಯಗಳು ಉತ್ತಮ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕಕ್ಕೆ ಸಾಕ್ಷಿಯಾಗಿವೆ. ಮೂಲಸೌಕರ್ಯವು ಯಾವುದೇ ತಾರತಮ್ಯವಿಲ್ಲದೆ ಎಲ್ಲೆಡೆಯೂ ಮೂಲಸೌಕರ್ಯದ ಹಂಚಿಕೆ, ನಿಜವಾದ ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಮೋದಿ ತಿಳಿಸಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಈ ಪ್ರದೇಶದ ಜನರಿಗೆ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ವೇಗ ಮತ್ತು ಸೌಕರ್ಯದೊಂದಿಗೆ ಪ್ರಯಾಣಿಸಲು ಮಾರ್ಗವನ್ನು ಒದಗಿಸುತ್ತದೆ. ಪ್ರಸುತ್ತ, ವೇಗದ ರೈಲುಗಳು ಗುವಾಹಟಿಯಿಂದ ಜಲಪಾಯ್ ಗುರಿಯ ನಡುವಿನ ಪ್ರಯಾಣಕ್ಕೆ ಸುಮಾರು 6 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅದೇ ದೂರವನ್ನು ತಲುಪಲು 5 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳತ್ತದೆ.
ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಅಸ್ಸಾಂ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಮತ್ತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾಗವಹಿಸಿದ್ದರು.