ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಪಟ್ಟಣದಿಂದ ದೇಶದ ಮೊದಲ 'ವಂದೇ ಭಾರತ್ ಸ್ಲೀಪರ್ ರೈಲಿ'ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಸಿರು ನಿಶಾನೆ ತೋರಿದರು. ಈ ರೈಲು ಪಶ್ಚಿಮ ಬಂಗಾಳದ ಹೌರಾ ಮತ್ತು ಗುವಾಹಟಿ (ಕಾಮಾಖ್ಯ) ನಡುವೆ ಸಂಚರಿಸಲಿದೆ.

ರೈಲಿನೊಳಗೆ ಮೋದಿ ಅವರು ಮಕ್ಕಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಆಧುನಿಕ ಭಾರತದ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಪೂರೈಸಲು ಸಂಪೂರ್ಣ ಹವಾನಿಯಂತ್ರಿತ (ಎಸಿ) ವಂದೇ ಭಾರತ್ ಸ್ಲೀಪರ್ ರೈಲನ್ನು ಪ್ರಯಾಣಿಕರಿಗಾಗಿ ಅಭಿವೃದ್ಧಿಪಡಿಸಲಾಗಿದೆ. ಕಡಿಮೆ ದರದಲ್ಲಿ ವಿಮಾನಯಾನ ಪ್ರಯಾಣದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಈ ರೈಲು ದೂರದ ಪ್ರಯಾಣವನ್ನು ವೇಗವಾಗಿ, ಸುರಕ್ಷಿತವಾಗಿ ಮತ್ತು ಹೆಚ್ಚು ಅನುಕೂಲಕರವಾಗಿಸುತ್ತದೆ ಎಂದು ತಿಳಿಸಿದೆ.

ಅಲ್ಲದೇ ಈ ರೈಲು ಹೌರಾ ಮತ್ತು ಗುವಾಹಟಿ ಮಾರ್ಗದ ಪ್ರಯಾಣವನ್ನು ಸುಮಾರು 2.5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜತೆಗೆ ಧಾರ್ಮಿಕ ಮತ್ತು ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದೆ ಎಂದೂ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
.ಗಂಟೆಗೆ 180 ಕಿ.ಮೀ ವೇಗದಲ್ಲಿ ಸಂಚರಿಸಿದ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು!.ವಂದೇ ಭಾರತ್ ಸ್ಲೀಪರ್ ರೈಲಿಗೆ ಶೀಘ್ರ ಚಾಲನೆ: ಸ್ನಾನಗೃಹದಲ್ಲಿ ಬಿಸಿನೀರಿನ ಸೌಲಭ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.