ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಷ್ಠೆ ಉಳಿಸಿಕೊಳ್ಳಲು ಇಟಲಿಗೆ ಹಾರಿದ ಪ್ರಧಾನಿ: ಕಾಂಗ್ರೆಸ್‌

Published 13 ಜೂನ್ 2024, 5:38 IST
Last Updated 13 ಜೂನ್ 2024, 5:38 IST
ಅಕ್ಷರ ಗಾತ್ರ

ನವದೆಹಲಿ: ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಸಿದ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಗೆ ತೆರಳಿದ್ದಾರೆ’ ಎಂದು ಕಾಂಗ್ರೆಸ್‌ ಹೇಳಿದೆ. 

ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಮಾತನಾಡಿ, ‘ಭಾರತದ ದೃಷ್ಟಿಯಲ್ಲಿ 2007ರ ಜೂನ್‌ನಲ್ಲಿ ಜರ್ಮನಿಯಲ್ಲಿ ನಡೆದ ಜಿ 7 ಶೃಂಗಸಭೆ ಅತ್ಯಂತ ಮಹತ್ವದ್ದು. ಏಕೆಂದರೆ ಜಾಗತಿಕ ಹವಾಮಾನ ಬದಲಾವಣೆಯ ಚರ್ಚೆಯಲ್ಲಿ ಡಾ. ಮನಮೋಹನ್ ಸಿಂಗ್ ಮತ್ತು ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಅವರು ‘ಸಿಂಗ್-ಮಾರ್ಕೆಲ್’ ಸೂತ್ರವನ್ನು ಜಗತ್ತಿಗೆ ಪರಿಚಯಿಸಿದರು’ ಎಂದರು.

‘ಅದು ಇನ್ನೂ ಚರ್ಚೆಯಾಗುತ್ತಿದೆ. ಡಾ. ಮನಮೋಹನ್ ಸಿಂಗ್ ಅವರು ಜಾಗತಿಕವಾಗಿ ದಕ್ಷಿಣ ರಾಷ್ಟ್ರದ ಧ್ವನಿಯಾಗಿ ಹೊರಹೊಮ್ಮಿದ್ದು ಕೆಲಸದ ಮೂಲಕವೇ ಹೊರತು ಪೊಳ್ಳು ಸ್ವ-ಹೆಮ್ಮೆಗಳ ಮೂಲಕ ಅಲ್ಲ’ ಎಂದು ರಮೇಶ್ ಮೋದಿಯನ್ನು ಕುಟುಕಿದರು.

‘ನಮ್ಮ ‘ಮೂರನೇ ಒಂದು ಭಾಗ’ದ ಪ್ರಧಾನ ಮಂತ್ರಿಯವರು (ಎನ್‌ಡಿಎ ಮೈತ್ರಿಕೂಟ) ಈ ವರ್ಷದ ಶೃಂಗಸಭೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಸಿದ ತಮ್ಮ ಪ್ರತಿಷ್ಠೆಯನ್ನು ಉಳಿಸಲು ಇಟಲಿಗೆ ಹಾರಿದ್ದಾರೆ. ಈ ಸಂದರ್ಭದಲ್ಲಿ ಈ ಇತಿಹಾಸವನ್ನು ತಿಳಿದುಕೊಳ್ಳಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT