ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣೆಯಲ್ಲಿ ಗೆಲುವು: ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿಗೆ ಭರ್ಜರಿ ಸ್ವಾಗತ

Published 7 ಡಿಸೆಂಬರ್ 2023, 4:56 IST
Last Updated 7 ಡಿಸೆಂಬರ್ 2023, 4:56 IST
ಅಕ್ಷರ ಗಾತ್ರ

ನವದೆಹಲಿ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಗುರುವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಮೊದಲ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಿರಿಯ ನಾಯಕರು ಮೋದಿ ಅವರನ್ನು ನಿಂತು ಅಭಿನಂದಿಸುತ್ತಿದ್ದಂತೆ ಪಕ್ಷದ ಸಂಸದರು ಅವರ ನಾಯಕತ್ವವನ್ನು ಶ್ಲಾಘಿಸಿ ಘೋಷಣೆಗಳನ್ನು ಕೂಗಿದ್ದಾರೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡರೆ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಕಾಂಗ್ರೆಸ್ ಕೈಯಿಂದ ಅಧಿಕಾರ ಕಸಿದುಕೊಂಡಿದೆ.

ಮೋದಿಯವರ ನಾಯಕತ್ವವೇ ದೊಡ್ಡ ಗೆಲುವಿಗೆ ಪ್ರಮುಖ ಕಾರಣ ಎಂದು ಸಂಸದರು ಹೊಗಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಶಾಲು ಹೊದಿಸಿ, ಹಾರ ಹಾಕಿ ಮೋದಿಯವರನ್ನು ಸನ್ಮಾನಿಸಿದ್ದಾರೆ.

ತೆಲಂಗಾಣದಲ್ಲಿ ಬಿಆರ್‌ಎಸ್‌ನಿಂದ ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡಿದ್ದು, ಅಲ್ಲಿ ಬಿಜೆಪಿಯ ಮತ ಗಳಿಕೆ ಹೆಚ್ಚಾಗಿದೆ.

ತನ್ನ ಎಲ್ಲ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರನ್ನು ಒಳಗೊಂಡಿರುವ ಬಿಜೆಪಿ ಸಂಸದೀಯ ಪಕ್ಷವು ಸಾಮಾನ್ಯವಾಗಿ ಅಧಿವೇಶನಗಳ ಸಮಯದಲ್ಲಿ ವಾರಕ್ಕೊಮ್ಮೆ ಸಭೆ ಸೇರುತ್ತದೆ.

ಸಭೆಯಲ್ಲಿ, ಪಧಾನಿ ಮೋದಿ ಸೇರಿದಂತೆ ನಾಯಕರು ಸಂಸತ್ತಿನ ಕಾರ್ಯಸೂಚಿ ಮತ್ತು ಪಕ್ಷದ ಸಾಂಸ್ಥಿಕ ಹಾಗೂ ರಾಜಕೀಯ ಪ್ರಚಾರಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT