ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಾಧ್ಯ ಎನಿಸಿದ್ದ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿದ ಪ್ರಧಾನಿ ಮೋದಿ: ಅಮಿತ್ ಶಾ

Published 15 ಮಾರ್ಚ್ 2024, 4:18 IST
Last Updated 15 ಮಾರ್ಚ್ 2024, 4:18 IST
ಅಕ್ಷರ ಗಾತ್ರ

ಅಹಮದಾಬಾದ್: ಅಸಾಧ್ಯ ಎನಿಸಿದ್ದ ಎಲ್ಲ ಕಾರ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಪೂರ್ಣಗೊಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಒಂದು ಶ್ರೇಣಿ ಒಂದು ಪಿಂಚಣಿ (ಒಆರ್‌ಒಪಿ) ಸೇರಿದಂತೆ ಅಸಾಧ್ಯ ಎನಿಸಿದ್ದ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಗುರುವಾರ ಅಹಮದಾಬಾದ್ ಮತ್ತು ಗಾಂಧಿನಗರ ಜಿಲ್ಲೆಗಳಲ್ಲಿ ₹3,012 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಅವರು ಈ ಕುರಿತು ಪ್ರತಿಕ್ರಿಯಿಸಿದರು.

ಹಿಂದಿನ ಕಾಂಗ್ರೆಸ್ ಸರ್ಕಾರಕ್ಕಿಂತ ಭಿನ್ನವಾಗಿ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳ್ಳುತ್ತದೆ. ಕಳೆದ ಐದು ವರ್ಷಗಳಲ್ಲಿ ನಾನು ಭೂಮಿಪೂಜೆ ನೆರವೇರಿಸಿದ ಎಲ್ಲ ಯೋಜನೆಗಳಲ್ಲಿ ಶೇ 91ರಷ್ಟು ಪೂರ್ಣಗೊಂಡಿದೆ. ಇದು ಬಿಜೆಪಿಯ ಕೆಲಸದ ಸಂಸ್ಕೃತಿ ಎಂದು ಹೇಳಿದ್ದಾರೆ.

2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ, ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ 50 ವರ್ಷ ಅಥವಾ ಅದಕ್ಕಿಂತ ಹಿಂದಿನ ಅಪೂರ್ಣ ಕೆಲಸ ಕಾರ್ಯಗಳು ಒಳಗೊಂಡಿತ್ತು. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸುವ ನಮ್ಮ ಭರವಸೆಯ ಬಗ್ಗೆ ವಿಪಕ್ಷಗಳು ಗೇಲಿ ಮಾಡುತ್ತಿದ್ದವು. ಇತ್ತೀಚೆಗೆ ಪ್ರಧಾನಿ ಅವರು ಪ್ರಾಣ ಪ್ರತಿಷ್ಠಾಪನೆ ಮಾಡುವ ಮೂಲಕ ರಾಮಮಂದಿರ ಉದ್ಘಾಟಿಸಿದ್ದಾರೆ. ಅಸಾಧ್ಯ ಎನಿಸಿದ್ದ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

80 ಕೋಟಿ ನಾಗರಿಕರಿಗೆ ಉಚಿತ ಪಡಿತರ, ಬಡವರಿಗೆ 12 ಕೋಟಿ ಶೌಚಾಲಯಗಳ ನಿರ್ಮಾಣ, ನಾಲ್ಕು ಕೋಟಿ ನಾಗರಿಕರಿಗೆ ಮನೆ ಹಂಚಿಕೆ, 10 ಕೋಟಿ ಮನೆಗಳಿಗೆ ಗ್ಯಾಸ್ ಸಂಪರ್ಕ ಮತ್ತು 14 ಕೋಟಿ ನಾಗರಿಕರಿಗೆ ನಳ್ಳಿ ನೀರಿನ ಸಂಪರ್ಕ ಮೋದಿ ಸರ್ಕಾರದ ಇತರ ಪ್ರಮುಖ ಸಾಧನೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT