ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನಿಗಳ ಸಾಧನೆಯ ಶ್ರೇಯಸ್ಸು ಪಡೆಯಲು ಪ್ರಧಾನಿ ಯತ್ನ: ಕಾಂಗ್ರೆಸ್ ಟೀಕೆ

Published 24 ಆಗಸ್ಟ್ 2023, 10:38 IST
Last Updated 24 ಆಗಸ್ಟ್ 2023, 10:38 IST
ಅಕ್ಷರ ಗಾತ್ರ

ನವದೆಹಲಿ: ಚಂದ್ರಯಾನ-3 ಯೋಜನೆಯ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ವಿಜ್ಞಾನಿಗಳ ಸಾಧನೆಯ ಶ್ರೇಯಸ್ಸನ್ನು ಪಡೆಯಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಚಂದ್ರಯಾನ-3 ಯೋಜನೆಯ ಯಶಸ್ಸಿನ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿ ಇಳಿಯುವ ಸಂಭ್ರಮ ಮತ್ತು ಹೆಮ್ಮೆ ನಮ್ಮೊಂದಿಗೆ ದೀರ್ಘಕಾಲ ಉಳಿಯಲಿದೆ ಎಂದು ಹೇಳಿದರು.

ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್ ಮುಂದಾಳತ್ವದಲ್ಲಿ ನಿಜಕ್ಕೂ ಇತಿಹಾಸವನ್ನು ಸೃಷ್ಟಿಸಿದ್ದೇವೆ. ಸೋಮನಾಥ್ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದರು.

ಆದರೆ ಕಪಟತನ ತೋರಿರುವ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡ್ ಆದ ತಕ್ಷಣ ಪರದೆಯಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ, ವಿಜ್ಞಾನಿಗಳ ಸಾಧನೆಯ ಶ್ರೇಯಸ್ಸು ಪಡೆಯಲು ಯತ್ನಿಸಿದ್ದಾರೆ. ಆದರೆ ಇಸ್ರೊ ಮತ್ತು ವಿಜ್ಞಾನಿಗಳಿಗೆ ನೆರವು ನೀಡುವಲ್ಲಿ ಸರ್ಕಾರವು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಚಂದ್ರಯಾನ-3ರ ಯೋಜನೆಯಲ್ಲಿ ಕೆಲಸ ಮಾಡಿದ್ದ ಹೆವಿ ಎಂಜಿನಿಯರ್ ಕಾರ್ಪೋರೇಷನ್ (ಎಚ್‌ಇಸಿ) ಎಂಜಿನಿಯರ್‌ಗಳಿಗೆ ಕಳೆದ 17 ತಿಂಗಳು ಸಂಬಳ ಏಕೆ ಪಾವತಿ ಮಾಡಿಲ್ಲ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT