ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾ ದಾಳಿಗೆ 5 ವರ್ಷ: ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ, ಲೆ. ಗವರ್ನರ್ ನಮನ

Published 14 ಫೆಬ್ರುವರಿ 2024, 6:22 IST
Last Updated 14 ಫೆಬ್ರುವರಿ 2024, 6:22 IST
ಅಕ್ಷರ ಗಾತ್ರ

ಜಮ್ಮು: 2019ರ ಇದೇ ದಿನ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ(ಸಿಆರ್‌ಪಿಎಫ್) 40 ಯೋಧರು ಹುತಾತ್ಮರಾಗಿದ್ದರು.

ಪಾಕಿಸ್ತಾನದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಸೂಸೈಡ್ ಬಾಂಬರ್, ಸ್ಫೋಟಕ ತುಂಬಿದ ವಾಹನವನ್ನು ಸೇನಾ ವಾಹನಕ್ಕೆ ಗುದ್ದಿಸಿ ವಿಧ್ವಂಸಕ ಕೃತ್ಯ ಎಸಗಿದ್ದ.

ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತೀಯ ಸೇನಾಪಡೆಯು ಪಾಕಿಸ್ತಾನಕ್ಕೆ ನುಗ್ಗಿ ಬಾಲಾಕೋಟ್ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು.

ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಹಲವರು ಗೌರವ ನಮನ ಅರ್ಪಿಸಿದ್ದಾರೆ.

‘ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ನಮ್ಮ ಧೈರ್ಯಶಾಲಿ ಹೀರೊಗಳಿಗೆ ನಮನ ಸಲ್ಲಿಸುತ್ತೇನೆ. ದೇಶಕ್ಕೆ ಅವರು ಮಾಡಿರುವ ಸೇವೆ ಮತ್ತು ತ್ಯಾಗವನ್ನು ಜನರು ಸದಾ ಸ್ಮರಿಸುತ್ತಾರೆ’ ಎಂದು ಎಕ್ಸ್ ಪೋಸ್ಟ್‌ನಲ್ಲಿ ಮೋದಿ ಹೇಳಿದ್ದಾರೆ.

‘2019ರ ಭಯೋತ್ಪಾದಕ ದಾಳಿಯಲ್ಲಿ ದೇಶಕ್ಕಾಗಿ ಬಲಿದಾನ ನೀಡಿದ ಹುತಾತ್ಮರಿಗೆ ನನ್ನ ನಮನಗಳು. ಅವರ ಧೈರ್ಯ, ತ್ಯಾಗ, ನಿಸ್ವಾರ್ಥ ಸೇವೆಯಿಂದಾಗಿ ದೇಶವು ಅವರಿಗೆ ಸದಾ ಋಣಿಯಾಗಿರುತ್ತದೆ’ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT