ನವದೆಹಲಿ: ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ಹುದ್ದೆಗೆ ಅಭ್ಯರ್ಥಿಗಳನ್ನು ಆರಿಸಿ, ಶಿಫಾರಸು ಮಾಡಲು ಪ್ರಧಾನಿ ಮೋದಿ ನೇತೃತ್ವದ ಸಮಿತಿಯು ಡಿಸೆಂಬರ್ 10ರಂದು ಸಭೆ ನಡೆಸಲಿದೆ.

ಕೇಂದ್ರ ಮಾಹಿತಿ ಆಯೋಗ ಹಾಗೂ ರಾಜ್ಯ ಮಾಹಿತಿ ಆಯೋಗದಲ್ಲಿ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿಗೊಳಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ನಡೆಸಿದೆ.

ಈ ವೇಳೆ ಕೇಂದ್ರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ‘ಡಿ.10ಕ್ಕೆ ಸಭೆ ನಿಗದಿಪಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಮಿತಿಯ ಸದಸ್ಯರಿಗೆ ಈಗಾಗಲೇ ನೋಟಿಸ್ ಕೂಡ ನೀಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ನಟರಾಜ್ ಅವರ ಅರಿಕೆಯನ್ನು ಪರಿಗಣಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ. ಇದೇ ವೇಳೆ ರಾಜ್ಯ ಮಾಹಿತಿ ಆಯೋಗಗಳಲ್ಲಿರುವ ಸಿಬ್ಬಂದಿಯ ಸಂಖ್ಯೆ, ಖಾಲಿ ಉಳಿದಿರುವ ಹುದ್ದೆಗಳು ಮತ್ತು ಆಯೋಗದ ಎದುರು ಬಗೆಹರಿಯದೇ ಉಳಿದಿರುವ ಪ್ರಕರಣಗಳ ಸಂಖ್ಯೆಯ ಬಗ್ಗೆ ಮಾಹಿತಿ ಸಲ್ಲಿಸುವಂತೆ ರಾಜ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.

ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಮಾಹಿತಿ ಆಯೋಗದ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿಗೊಳಿಸಿ, ಪರಿಪೂರ್ಣವಾಗಿ ಕಾರ್ಯನಿರ್ವಹಿಸುತ್ತಿರುವುದನ್ನೂ ನ್ಯಾಯಪೀಠ ಗಮನಿಸಿದೆ.

ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 12(3)ರ ಅನ್ವಯ ಪ್ರಧಾನಿ ನೇತೃತ್ವದ ಸಮಿತಿಯು ಮುಖ್ಯ ಮಾಹಿತಿ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ಆಯ್ಕೆ ಮತ್ತು ಶಿಫಾರಸುಗಳನ್ನು ಮಾಡಬೇಕಿದೆ. ಈ ಸಮಿತಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಪ್ರಧಾನಿ ಅವರಿಂದ ನಾಮನಿರ್ದೇಶನಗೊಂಡಿರುವ ಕೇಂದ್ರ ಸಚಿವರೂ ಇರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.