ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಪ್ರದೇಶ | ಹಣದ ಮೂಲಕ ಕಾಂಗ್ರೆಸ್‌ ಸರ್ಕಾರ ಕೆಡವಲು ಮೋದಿ ಯತ್ನ: ಪ್ರಿಯಾಂಕಾ

Published 27 ಮೇ 2024, 10:14 IST
Last Updated 27 ಮೇ 2024, 10:14 IST
ಅಕ್ಷರ ಗಾತ್ರ

ಶಿಮ್ಲಾ: ಹಣ ಬಲದ ಮೂಲಕ ಹಿಮಾಚಲ ಪ್ರದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡಿರುವ ಕಾಂಗ್ರೆಸ್‌ ಸರ್ಕಾರವನ್ನು ಕೆಡವಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿದ್ದಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಚಂಬಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಕಾಂಗ್ರಾ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಆನಂದ್‌ ಶರ್ಮಾ ಪರ ಮತಯಾಚಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ 55 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಶ್ರೀಮಂತ ಪಕ್ಷವಾಗಲು ಸಾಧ್ಯವಾಗಲಿಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 10 ವರ್ಷಗಳಲ್ಲಿ ವಿಶ್ವದ ಅತ್ಯಂತ ಶ್ರೀಮಂತ ಪಕ್ಷವಾಗಿದೆ’ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ ಮತ್ತು ಹಣ ಬಲದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಕೆಡವಲು ಪ್ರಧಾನಿ ಮೋದಿ ಸರ್ವ ಪ್ರಯತ್ನಗಳನ್ನು ಮಾಡಿದ್ದಾರೆ. ಇಂತಹ ನಾಯಕ ನಿಮಗೆ ಬೇಕೆ?, ಮೋದಿ ಅವರಿಂದ ಹಿಡಿದು, ಬಿಜೆಪಿಯ ಎಲ್ಲಾ ನಾಯಕರ ಉದ್ದೇಶ ಅಧಿಕಾರ ಪಡೆದುಕೊಳ್ಳುವುದು ಮಾತ್ರ. ಅದಕ್ಕಾಗಿ ಅವರು ಹಣ ಬಲವನ್ನು ಬಳಸುತ್ತಾರೆ. ಅಲ್ಲದೆ, ಅವರ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ದೇವರ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ಅಥವಾ ಎರಡು ವರ್ಷಗಳಲ್ಲಿ ಬಿಜೆಪಿಯು ಸುಮಾರು ₹60 ಸಾವಿರ ಕೋಟಿಯನ್ನು ವೆಚ್ಚ ಮಾಡಿದೆ ಎಂದು ವರದಿಯೊಂದು ತಿಳಿಸಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ನನ್ನ ಹೃದಯ ಹಿಮಾಚಲ ಪ್ರದೇಶದಲ್ಲಿರುತ್ತದೆ. ಹಿಮಾಚಲ ಪ್ರದೇಶ ಒಂದು ಸುಂದರ ರಾಜ್ಯವಾಗಿದ್ದು, ತನ್ನ ಸಂಸ್ಕೃತಿ ಮತ್ತು ಪ್ರಾಮಾಣಿಕತೆಯಿಂದ ಹೆಸರುವಾಸಿಯಾಗಿದೆ. ದೇಶವು ಹಿಮಾಚಲ ಪ್ರದೇಶದಿಂದ ಕಲಿಯಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT