ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಗಳಿಗೆ ಹಾಗೂ ದೇಶದ ಇತರ ಭಾಗಗಳಿಗೆ ಪ್ರವಾಸ ಬೆಳಸಲು ಸಾಧ್ಯವಾಗುತ್ತದೆ. ಆದರೆ ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯವೇ ಇಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವರ ಸಂಕಷ್ಟಗಳನ್ನು ಆಲಿಸಲು ಪ್ರಧಾನಿಗೆ ಈವರೆಗೂ ಸಮಯ ಸಿಕ್ಕಿಲ್ಲವೇ?, ಕಳೆದ ವರ್ಷದಿಂದ ಇಲ್ಲಿಯವರೆಗೂ ಭೇಟಿ ನೀಡಲು ಏಕೆ ಸಾಧ್ಯವಾಗಲಿಲ್ಲ. ಶಾಂತಿಯನ್ನು ಮರುಸ್ಥಾಪಿಸುಲು ಯಾಕೆ ಪ್ರಯತ್ನಿಸುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ.