ಪಿಟಿಐ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆರ್ಬಿಯಾದ ಅಧ್ಯಕ್ಷ ಅಲೆಕ್ಸಾಂಡರ್ ವೊಚಿಚ್ ಅವರನ್ನು ಬುಧವಾರ ಭೇಟಿ ಮಾಡಿದರು. ರಕ್ಷಣೆ, ತಯಾರಿಕೆ, ರಸಗೊಬ್ಬರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿ ಎರಡೂ ದೇಶಗಳ ಸಹಕಾರವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದರು.

ಇಲ್ಲಿ ನಡೆಯುತ್ತಿರುವ ‘ಎಐ ಇಂಪ್ಯಾಕ್ಟ್ ಶೃಂಗ’ದಲ್ಲಿ ಇಬ್ಬರೂ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದರು. ‘ಬಹಳ ವರ್ಷಗಳಿಂದ ಭಾರತ ಮತ್ತು ಸೆರ್ಬಿಯಾವು ಬಹಳ ಹತ್ತಿರದಿಂದ ಕೆಲಸ ಮಾಡಿವೆ. ಮುಂದಿನ ದಿನಗಳಲ್ಲಿ ನಾವು ಇನ್ನಷ್ಟು ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ ಎಂಬ ನಂಬಿಕೆ ಇದೆ’ ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

‘ಭಾರತವು ನಮಗೆ ಅತ್ಯಂತ ಮಹತ್ವದ ಪಾಲುದಾರ ದೇಶ. ನಮ್ಮ ದೇಶದಲ್ಲಿ ಇನ್ನಷ್ಟು ಹೂಡಿಕೆ ಮಾಡುವಂಥ ಆರ್ಥಿಕ ಸಹಕಾರವನ್ನು ಹೆಚ್ಚಿಸಿಕೊಳ್ಳಲು ನಾವು ಬಯಸುತ್ತೇವೆ. ನಮ್ಮ ಸೆರ್ಬಿಯನ್ ಎಕ್ಸ್ಪೋದಲ್ಲಿ ಪಾಲ್ಗೊಳ್ಳಲು ಭಾರತವು ಬಯಸುತ್ತಿರುವುದು ನಮಗೆ ಸಂತೋಷ ತಂದಿದೆ’ ಎಂದು ಅಲೆಕ್ಸಾಂಡರ್ ವೊಚಿಚ್ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.