ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Manipur Violence| ಮಣಿಪುರದ ಜನರನ್ನು ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ:ಖರ್ಗೆ

Published 4 ಸೆಪ್ಟೆಂಬರ್ 2024, 11:27 IST
Last Updated 4 ಸೆಪ್ಟೆಂಬರ್ 2024, 11:27 IST
ಅಕ್ಷರ ಗಾತ್ರ

ನವದೆಹಲಿ: ಸಂಘರ್ಷ ಪೀಡಿತ ಮಣಿಪುರದ ಜನರನ್ನು ರಕ್ಷಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲರಾಗಿದ್ದಾರೆ. ಈ ಮೂಲಕ ಭಾರತೀಯರಿಗೆ ಮಾಡಲಾದ ದ್ರೋಹಗಳ ಪಟ್ಟಿಗೆ ಅವರ ಈ ನಡೆಯು ಸೇರ್ಪಡೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಟೀಕಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಹಿಂಸಾಚಾರ ಪೀಡಿತ ಮಣಿಪುರವನ್ನು ಸಹಜ ಸ್ಥಿತಿಗೆ ತರಲು ಡಬಲ್‌ ಎಂಜಿನ್‌ ಸರ್ಕಾರ ಏನನ್ನೂ ಮಾಡಿಲ್ಲ, ಸುಮಾರು 16 ತಿಂಗಳಿಂದ ಗಲಭೆ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಪಿಸಿದರು.

ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಮತ್ತು ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಯಾವುದೇ ಶಾಂತಿ ಸಂಧಾನದಂತಹ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಮಣಿಪುರದ ಸಿಎಂ ಎನ್. ಬಿರೇನ್ ಸಿಂಗ್ ಅವರನ್ನು ಏಕೆ ಸಿಎಂ ಸ್ಥಾನದಿಂದ ವಜಾಗೊಳಿಸಲಿಲ್ಲ. ಸಾರ್ವಜನಿಕವಾಗಿ ಅಸಂಬದ್ಧ ಹೇಳಿಕೆಗಳನ್ನು ನೀಡುವುದು, ರಾಜೀನಾಮೆ ನೀಡುವ ನಾಟಕ ಮಾಡುವ ಮತ್ತು ಗಲಭೆ ಪ್ರಕರಣಗಳ ಸಂಬಂಧ ನಿರ್ಲಕ್ಷ್ಯ ತೋರಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ.

‘ಮೋದಿ ಅವರೇ, ನೀವು ಏಕೆ ಪಶ್ಚಾತ್ತಾಪ ಪಟ್ಟಿದ್ದೀರಿ? ಮಣಿಪುರಕ್ಕೆ ಭೇಟಿ ನೀಡಲು ಏಕೆ ತಲೆಕೆಡಿಸಿಕೊಳ್ಳುತ್ತಿದ್ದೀರಿ? ನಿಮ್ಮ ಅಹಂಕಾರದಿಂದಾಗಿ ಇಲ್ಲಿನ ಜನರು ನರಳುತ್ತಿದ್ದಾರೆ. ನಿಮ್ಮ ಅಸಮರ್ಥ ಸರ್ಕಾರದಿಂದ ಶಾಂತಿ ನೆಲೆಸುವಂತೆ ಮಾಡಲು ಸಾಧ್ಯವಾಗುತ್ತಿಲ್ಲ‘ ಎಂದು ದೂರಿದ್ದಾರೆ.

ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ 226 ಜನರು ಮೃತಪಟ್ಟಿದ್ದು, 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT