ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

Published 26 ಅಕ್ಟೋಬರ್ 2023, 9:41 IST
Last Updated 26 ಅಕ್ಟೋಬರ್ 2023, 9:41 IST
ಅಕ್ಷರ ಗಾತ್ರ

ಅಹ್ಮದನಗರ (ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ಮಹಾರಾಷ್ಟ್ರದ ಶಿರಡಿಯಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಉಪಸ್ಥಿತರಿದ್ದರು.

ಇದೇ ದೇವಸ್ಥಾನದಲ್ಲಿ ಪ್ರಧಾನ ಮಂತ್ರಿಯವರು ನೂತನ 'ದರ್ಶನ ಕ್ಯೂ' ಕಾಂಪ್ಲೆಕ್ಸ್ ಅನ್ನು ಉದ್ಘಾಟಿಸಲಿದ್ದಾರೆ. ನಂತರ ನೀಲವಂಡೆ ಅಣೆಕಟ್ಟೆಗೆ ಜಲಪೂಜೆ ನೆರವೇರಿಸಿ ಅದನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಇದೇ ವೇಳೆ ಶಿರಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ, ಆರೋಗ್ಯ, ರೈಲು, ರಸ್ತೆ, ತೈಲ ಮತ್ತು ಅನಿಲ ಕ್ಷೇತ್ರ ಸೇರಿದಂತೆ ಸುಮಾರು ₹7,500 ಕೋಟಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT