ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢದ ‘ಬಾಮಲೇಶ್ವರಿ’ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಮೋದಿ

Published 5 ನವೆಂಬರ್ 2023, 10:19 IST
Last Updated 5 ನವೆಂಬರ್ 2023, 10:23 IST
ಅಕ್ಷರ ಗಾತ್ರ

ರಾಜನಂದಗಾಂವ್ (ಛತ್ತೀಸಗಢ): ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸಗಢದ ರಾಜನಂದಗಾಂವ್ ಜಿಲ್ಲೆಯಲ್ಲಿರುವ ‘ ಮಾ ಬಾಮಲೇಶ್ವರಿ‘ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.

ರಾಜನಂದಗಾಂವ್‌ ಜಿಲ್ಲೆಯ ಡೊಂಗರಗಢದ ಚಂದ್ರಗಿರಿ ಜೈನ ದೇವಾಲಯಕ್ಕೆ ಭೇಟಿ ನೀಡಿದ ಅವರು ಪ್ರಾರ್ಥನೆ ಸಲ್ಲಿಸಿದರು. ನರೇಂದ್ರ ಮೋದಿ ಅವರು ಸಂತ ವಿದ್ಯಾಸಾಗರ ಮಹಾರಾಜರಿಂದ ಆಶೀರ್ವಾದ ಪಡೆದರು.

ಇಲ್ಲಿನ ಡೊಂಗರಗಢದಲ್ಲಿ ನಡೆಯಲಿರುವ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.

ಮುಂಬರುವ ಛತ್ತೀಸಗಢ ಚುನಾವಣೆಗೆ ಪೂರ್ವಭಾವಿಯಾಗಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ, ಪ್ರಸ್ತುತ ಅಧಿಕಾರದಲ್ಲಿರುವ ಕಾಂಗ್ರೆಸ್‌ ಅನ್ನು ಕೆಳಗಿಳಿಸಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT