ನವದೆಹಲಿ: ವಿಕಸಿತ ಭಾರತ ನಿರ್ಮಿಸುವಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಲಿದ್ದಾರೆ. ಸರ್ಕಾರ ಕೈಗೊಂಡ ಉಪಕ್ರಮಗಳು ಅವರನ್ನು ಸಬಲೀಕರಣಗೊಳಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಪಿಟಿಐ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಿಂದ ಭಾರತೀಯ ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನದಂತಹ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.

‘ಅದು ಬಾಹ್ಯಾಕಾಶವಾಗಲಿ ಅಥವಾ ನವೋದ್ಯಮಗಳಾಗಲಿ, ಅವರು ಉತ್ತಮ ಪರಿಣಾಮ ಬೀರುತ್ತಿದ್ದಾರೆ’ಎಂದು ಮೋದಿ ಹೇಳಿದ್ದಾರೆ.

ತಮ್ಮ ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರದಲ್ಲೂ ಮಹಿಳೆಯರ ಕಲ್ಯಾಣವಿರುತ್ತದೆ. ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಸ್ಟೆಮ್(ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ)) ಹಾಸ್ಟೆಲ್ಗಳನ್ನು ಸ್ಥಾಪಿಸುವ ಹೊಸ ಉಪಕ್ರಮವು ಮಹಿಳೆಯರಲ್ಲಿ ಶಿಕ್ಷಣ ಮತ್ತು ನಾವೀನ್ಯತೆಯ ಗಮನಾರ್ಹ ಏರಿಕೆಗೆ ಕಾರಣವಾಗಬಹುದು ಎಂದು ಮೋದಿ ಹೇಳಿದ್ದಾರೆ.

ಮುಂದಿನ ವರ್ಷ 1.5 ಲಕ್ಷ ಆರೈಕೆದಾರರಿಗೆ ತರಬೇತಿ ನೀಡುವ ಮತ್ತು ಅಲೈಡ್ ಹೆಲ್ತ್ ಪ್ರೊಫೆಷನಲ್ಸ್ಗೆ ಸಂಸ್ಥೆಗಳನ್ನು ವಿಸ್ತರಿಸುವ ನಿರ್ಧಾರವು ಆರೈಕೆ ಕೆಲಸವನ್ನು ವೃತ್ತಿಪರಗೊಳಿಸುತ್ತದೆ. ಆರೈಕೆದಾರರಿಗೆ ತರಬೇತಿ ನೀಡುವ ನಿರ್ಧಾರವು ಮಹಿಳೆಯರಿಗೆ ಗೌರವಾನ್ವಿತ, ಪ್ರಮಾಣೀಕೃತ ಉದ್ಯೋಗವನ್ನು ಸೃಷ್ಟಿಸುತ್ತದೆ. ಅದೇ ಸಮಯದಲ್ಲಿ ಭಾರತದ ಆರೋಗ್ಯ ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ಈ ವರ್ಷದ ಬಜೆಟ್ ಹೊಸ ಯುಗದ ವಲಯಗಳನ್ನು ಒಳಗೊಂಡಿದೆ ಎಂದೂ ಅವರು ಹೇಳಿದ್ದಾರೆ.

15,000 ಶಾಲೆಗಳು ಮತ್ತು 500 ಕಾಲೇಜುಗಳಲ್ಲಿ ಎವಿಜಿಸಿ ಕಂಟೆಂಟ್ ಕ್ರಿಯೇಟರ್ ಲ್ಯಾಬ್ಗಳು ಮತ್ತು ಸೃಜನಶೀಲ ಮೂಲಸೌಕರ್ಯಗಳ ಸ್ಥಾಪನೆಯ ಮೂಲಕ, ಅನಿಮೇಷನ್, ವಿಎಫ್ಎಕ್ಸ್, ಗೇಮಿಂಗ್ ಮತ್ತು ಡಿಜಿಟಲ್ ವಿಷಯದಂತಹ ಕ್ಷೇತ್ರಗಳಲ್ಲಿ ದಾಖಲೆಯ ಮಟ್ಟದ ಮಹಿಳಾ ಭಾಗವಹಿಸುವಿಕೆಯನ್ನು ಸರ್ಕಾರ ಖಚಿತಪಡಿಸುತ್ತಿದೆ ಎಂದು ತಿಳಿಸಿದ್ದಾರೆ.

ಇವು ಉದಯೋನ್ಮುಖ ಕ್ಷೇತ್ರಗಳಾಗಿದ್ದು, ಮಹಿಳೆಯರ ಭಾಗವಹಿಸುವಿಕೆಯು ಅವುಗಳನ್ನು ಇನ್ನಷ್ಟು ಚೈತನ್ಯಶೀಲವಾಗಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬುದು ನನ್ನ ದೃಢನಿಶ್ಚಯ ಎಂದು ಪ್ರಧಾನಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.