ನವದೆಹಲಿ:ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಇತರ ಗಣ್ಯರೊಂದಿಗೆ ಇಂದು ಬೆಳಿಗ್ಗೆ ರಾಜ್‌ಘಾಟ್‌ನಲ್ಲಿರುವ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕಕ್ಕೆ ಭೇಟಿ ನೀಡಿದ ಮೋದಿ, ಅಗಲಿದ ಚೇತನಗಳಿಗೆ ಪುಷ್ಪ ನಮನ ಸಲ್ಲಿಸಿದರು.
‘ಸತ್ಯ, ಸೌಹಾರ್ದತೆ ಮತ್ತು ಸಮಾನತೆಯಿಂದ ಕೂಡಿದ ಬಾಪು ಅವರ ಜೀವನ ಮತ್ತು ಆದರ್ಶಗಳು ದೇಶದ ಜನತೆಗೆ ಸದಾ ಸ್ಫೂರ್ತಿದಾಯಕವಾಗಿದೆ’ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
‘ಜೈ ಜವಾನ್, ಜೈ ಕಿಸಾನ್ ಘೋಷಣೆ ಮೂಲಕ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಜೀವನವನ್ನು ದೇಶದ ಸೈನಿಕರು, ರೈತರಿಗಾಗಿ ಮುಡಿಪಾಗಿಟ್ಟಿದ್ದರು’ ಎಂದೂ ಹೇಳಿದರು.
ಇದೇ ವೇಳೆ, ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಮೋದಿ ಅವರು ಭಾಗವಹಿಸಿದ್ದಾರೆ.