ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶಗಳು ನಮಗೆ ಪ್ರೇರಣೆಯಾಗಿದೆ. ಭಾರತದ ಶಾಂತಿ, ಸೋದರತ್ವ ಸಂದೇಶವನ್ನು ಜಗತ್ತಿಗೆ ಸಾರಿದರು. ಒಗ್ಗಟ್ಟಿನಲ್ಲಿ ಶಕ್ತಿ ಇದೆ ಎಂಬ ಅವರ ಮಾತುಗಳು ಸಾಮರಸ್ಯದ ಪಾಠವನ್ನು ನೆನಪಿಸುತ್ತದೆ ಎಂದು ಮೋದಿ ಹೇಳಿದ್ದಾರೆ.
1893 ರಲ್ಲಿ ಈ ದಿನದಂದು(ಸೆ.11) ಷಿಕಾಗೊದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಭಾಗಿಯಾಗಿದ್ದರು.