ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಪುರಾ ಪ್ರವಾಹ: ಸಂತ್ರಸ್ತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

Published 31 ಆಗಸ್ಟ್ 2024, 13:49 IST
Last Updated 31 ಆಗಸ್ಟ್ 2024, 13:49 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರಾದಲ್ಲಿ ಭೀಕರ ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಅವರು ತಲಾ ₹2 ಲಕ್ಷ ಪರಿಹಾರ ನೀಡಿದ್ದಾರೆ ಎಂದು  ಮುಖ್ಯಮಂತ್ರಿ ಮಾಣಿಕ್‌ ಸಹಾ ತಿಳಿಸಿದ್ದಾರೆ. 

‘ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಪ್ರಧಾನಿಯವರು ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ನೀಡಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿಯವರು ತೋರಿದ ಸಹಾನುಭೂತಿ ನಮಗೆ ಬಹುದೊಡ್ಡ ಬೆಂಬಲವಾಗಿದೆ’ ಎಂದು ಮುಖ್ಯಮಂತ್ರಿ ಸಹಾ ಅವರು ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

‘ಪ್ರವಾಹದಿಂದಾಗಿ ಉಂಟಾಗಿರುವ ಹಾನಿಯನ್ನು ಕೇಂದ್ರದ ಮಧ್ಯಂತರ ಸಮಿತಿಯು ಪರಿಶೀಲಿಸಿದ್ದು, ವರ‌ದಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ಶೀಘ್ರ ಸಲ್ಲಿಸುವುದಾಗಿ ಭರವಸೆ ನೀಡಿದೆ’ ಎಂದು ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ತ್ರಿಪುರಾದಲ್ಲಿ ಆಗಸ್ಟ್‌ 19–24ರ ನಡುವೆ ಪ್ರವಾಹಕ್ಕೆ ಸಿಲುಕಿ ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT