ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಈಗ ಬಿಜೆಪಿ ಯುಗ ಆರಂಭವಾಗಿದೆ. ಬಂಗಾಳದಲ್ಲಿ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೃಹತ್ ವೇದಿಕೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಬಿಜೆಪಿಯ ಹಿರಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಅವರಲ್ಲಿ 98 ವರ್ಷದ ಬಿಜೆಪಿ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಕೂಡ ಒಬ್ಬರಾಗಿದ್ದರು.

ವೇದಿಕೆ ಮೇಲೆ ಸರ್ಕಾರ್ ಅವರನ್ನು ಕಂಡ ಮೋದಿ, ಅವರ ಪಾದಗಳನ್ನು ಮುಟ್ಟಿ ಅಪ್ಪಿಕೊಂಡರು, ಪ್ರಧಾನಿ ಸರ್ಕಾರ್ ಅವರ ಆಶೀರ್ವಾದ ಪಡೆಯುತ್ತಿರುವುದನ್ನು ಕಂಡು ನೆರೆದ ಜನ ಹರ್ಷೋದ್ಗಾರ ವ್ಯಕ್ತಪಡಿಸಿದರು.

ಬಂಗಾಳದಲ್ಲಿ ಶ್ಯಾಮ್ಪ್ರಸಾದ ಮುಖರ್ಜಿ ಅವರ ನೇತೃತ್ವದಲ್ಲಿ 1980ರಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಬಂದಾಗಿನಿಂದ ಇಂದಿನವರೆಗೂ ಸರ್ಕಾರ್ ಬಿಜೆಪಿಯಲ್ಲೇ ಇದ್ದಾರೆ.

ಸ್ವಾತಂತ್ರ್ಯಾನಂತರ ಭಾರತದಲ್ಲಿ ನಡೆದ ರಾಷ್ಟ್ರೀಯತಾವಾದಿ ಚಳವಳಿಯಲ್ಲಿ ಸರ್ಕಾರ್ ಭಾಗಿಯಾಗಿದ್ದರು. 1952 ರಲ್ಲಿ, ಕಾಶ್ಮೀರದಲ್ಲಿ ಭಾರತೀಯ ತ್ರಿವರ್ಣ ಧ್ವಜವನ್ನು ಹಾರಿಸುವ ಚಳವಳಿಯ ಸಮಯದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ಸರ್ಕಾರ್ ಕೂಡ ಬಂಧನಕ್ಕೆ ಒಳಗಾಗಿದ್ದರು.

ಬಿಜೆಪಿ ರಚನೆಯಾದ ಮೇಲೆ ಸರ್ಕಾರ್, ಪಶ್ಚಿಮ ದಿನಾಜ್ಪುರ, ಜಲ್ಪೈಗುರಿ ಮತ್ತು ಡಾರ್ಜಿಲಿಂಗ್ ಜಿಲ್ಲೆಗಳಿಗೆ ಸಂಘಟನಾ ಸಂಯೋಜಕರಾದರು. ಒಂದು ವರ್ಷದೊಳಗೆ, ಅವರು ಸುಮಾರು 10,000 ಸದಸ್ಯರನ್ನು ಪಕ್ಷಕ್ಕೆ ಸೇರಿಸಿದ್ದರು. 1981 ರಿಂದ, ಅವರು ಜಿಲ್ಲಾ ಅಧ್ಯಕ್ಷರಾಗಿ ಏಳು ವರ್ಷಗಳ ಕಾಲ ಕೆಲಸ ಮಾಡಿದ್ದರು. ಪಕ್ಷದ ಸಾಂಸ್ಥಿಕ ರಚನೆಯಲ್ಲಿ ಸರ್ಕಾರ್ ಅವರದ್ದು ಅಪರೂಪದ ಸಾಧನೆ ಎಂದೇ ಪರಿಗಣಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.