ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧ, ಕ್ವಾಡ್ ಸೇರಿದಂತೆ ಹಲವು ಶೃಂಗಗಳಲ್ಲಿ ಸಹಕಾರ ನೀಡುವ ಬಗ್ಗೆ ಚರ್ಚಿಸಿದರು.
‘ಆಸ್ಟ್ರೇಲಿಯಾ ಪ್ರಧಾನಿ ಅವರೊಂದಿಗೆ ಮಾತುಕತೆ ನಡೆಸಿ ಸಂತಸವಾಯಿತು. ದ್ವಿಪಕ್ಷೀಯ ಸಂಬಂಧ ವೃದ್ಧಿ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಿದೆವು’ ಎಂದು ಮೋದಿ ಅವರು ಸೋಮವಾರ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
2017ರ ನವೆಂಬರ್‌ನಲ್ಲಿ ಭಾರತ, ಜಪಾನ್, ಅಮೆರಿಕ ಮತ್ತು ಆಸ್ಟ್ರೇಲಿಯಾ ದೇಶಗಳು ದೀರ್ಘಕಾಲದಿಂದ ಬಾಕಿ ಉಳಿದಿದ್ದ ‘ಕ್ವಾಡ್’ ರಚಿಸುವ ಪ್ರಸ್ತಾಪಕ್ಕೆ ರೂಪುರೇಷೆ ನೀಡಿದ್ದವು.