ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತೀಯ ಮೌಲ್ಯಗಳನ್ನು ಆಧರಿಸಿದ ಶಿಕ್ಷಣ ವ್ಯವಸ್ಥೆ ಅಗತ್ಯ: ಪ್ರಧಾನಿ ನರೇಂದ್ರ ಮೋದಿ

Published 11 ಫೆಬ್ರುವರಿ 2024, 8:23 IST
Last Updated 11 ಫೆಬ್ರುವರಿ 2024, 8:23 IST
ಅಕ್ಷರ ಗಾತ್ರ

ಟಂಕಾರಾ (ಗುಜರಾತ್‌): ಭಾರತೀಯ ಮೌಲ್ಯಗಳನ್ನು ಆಧರಿಸಿದ ಶಿಕ್ಷಣ ವ್ಯವಸ್ಥೆ ಇಂದಿನ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಗುಜರಾತಿನ ಮೊರ್ಬಿ ಜಿಲ್ಲೆಯ ಟಂಕಾರಾದಲ್ಲಿ ಆಯೋಜಿಸಲಾಗಿದ್ದ ಆರ್ಯ ಸಮಾಜ ಸಂಸ್ಥಾಪಕ ಸ್ವಾಮಿ ದಯಾನಂದ ಸರಸ್ವತಿಯವರ 200ನೇ ಜನ್ಮ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ, ‘ಸ್ವಾಮಿ ದಯಾನಂದ ಸರಸ್ವತಿ ಅವರು ಅಂದಿನ ಕಾಲದಲ್ಲಿಯೇ ನಮ್ಮ ಸಾಂಪ್ರದಾಯಿಕ ಮತ್ತು ಸಾಮಾಜಿಕ ಅನಿಷ್ಟಗಳು ನಮ್ಮನ್ನು ಹೇಗೆ ಹಾನಿಗೊಳಿಸಿದ್ದವು ಎಂಬುದನ್ನು ತೋರಿಸಿ ಕೊಟ್ಟಿದ್ದರು’ ಎಂದು ತಿಳಿಸಿದ್ದಾರೆ.

‘ಭಾರತೀಯ ಮೌಲ್ಯಗಳನ್ನು ಆಧರಿಸಿದ ಶಿಕ್ಷಣ ವ್ಯವಸ್ಥೆ ಇಂದಿನ ಅಗತ್ಯವಾಗಿದ್ದು, ಆರ್ಯ ಸಮಾಜದ ಶಾಲೆಗಳು ಇದಕ್ಕೆ ಕೇಂದ್ರಗಳಾಗಿವೆ. ದೇಶವು ಈಗ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಅದನ್ನು ವಿಸ್ತರಿಸುತ್ತಿದೆ. ಈ ಪ್ರಯತ್ನಗಳೊಂದಿಗೆ ಸಮಾಜವನ್ನು ಸಂಪರ್ಕಿಸುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದು ಮೋದಿ ಹೇಳಿದ್ದಾರೆ.

ಸ್ವಾಮಿ ದಯಾನಂದ ಸರಸ್ವತಿ ಅವರು ಸಮಾಜದಲ್ಲಿನ ಮಹಿಳೆಯರಿಗೆ ಸಮಾನ ಹಕ್ಕುಗಳಿಗಾಗಿ ಪ್ರತಿಪಾದಿಸಿದ್ದರು. ಅವರು ಜನಿಸಿದ ಗುಜರಾತ್‌ನಲ್ಲಿ ಜನಿಸಿರುವುದಕ್ಕೆ ನನಗೆ ಗೌರವವಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT