ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಭಾಗವಾದ ಜಗ್ತಿಯಾಲ್‌ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸಭೆ ನೆರೆಯ ಕರೀಂನಗರ ಲೋಕಸಭಾ ಕ್ಷೇತ್ರದ ಮೇಲೂ ಪ್ರಭಾವ ಬೀರುವ ಸಾಧ್ಯತೆಯಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಿಜಾಮಾಬಾದ್ ಮತ್ತು ಕರೀಂನಗರ ಎರಡೂ ಬಿಜೆಪಿ ತೆಕ್ಕೆಯಲ್ಲಿದ್ದವು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ತೆಲಂಗಾಣದ 17 ಲೋಕಸಭಾ ಸ್ಥಾನಗಳ ಪೈಕಿ 4 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. 2024ರ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈಗಾಗಲೇ ಹೈದರಾಬಾದ್‌ನ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ. ಅಲ್ಲದೇ ಕಳೆದ ವಾರ ನಾಗರಕರ್ನೂಲ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.
.ಲೋಕಸಭಾ ಚುನಾವಣೆ 2024: ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಮೊದಲ ರ‍್ಯಾಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.