ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾ.24 ಮಂಗಳವಾರ) ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ದೇಶವನ್ನಾವರಿಸಿರುವ ಕೊರೊನಾ ವೈರಸ್ ಭೀತಿಯ ಪ್ರಮುಖ ವಿಚಾರಗಳ ಕುರಿತು ಮೋದಿ ಈ ಭಾಷಣದಲ್ಲಿ ಮಾತನಾಡಲಿದ್ದಾರೆ.

ದೇಶದಲ್ಲಿ 490ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಮೋದಿ ಈ ಭಾಷಣಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ದೇಶದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದಾಗಿ ಈ ವರೆಗೆ 9 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಕರ್ನಾಟಕದವರೂ ಒಬ್ಬರು.

ಕಳೆದ ಗುರುವಾರವೂ ದೇಶವನ್ನುದ್ದೇಶಿ ಮಾತನಾಡಿದ್ದ ನರೇಂದ್ರ ಮೋದಿ ಅವರು, ಕೊರೊನಾ ವೈರಸ್ ವ್ಯಾಪಕಗೊಳ್ಳುವ ಸರಪಳಿಯನ್ನು ತುಂಡರಿಸಲು ದೇಶವ್ಯಾಪಿ ಜನತಾ ಕರ್ಫ್ಯೂ ಆಚರಿಸುವಂತೆ ಮನವಿ ಮಾಡಿದ್ದರು. ಅದರಂತೆ ಕಳೆದ ಭಾನುವಾರ ಇಡೀ ದೇಶಸ್ತಬ್ಧವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.