ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಮೇ 14ಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

Published 5 ಮೇ 2024, 13:07 IST
Last Updated 5 ಮೇ 2024, 13:07 IST
ಅಕ್ಷರ ಗಾತ್ರ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೇ 14 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

‘ಮೋದಿ ಅವರು 13 ರಂದು ರೋಡ್‌ ಶೋ ನಡೆಸಲಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆ ನಡೆಯುತ್ತಿದೆ. 14 ರಂದು ನಾಮಪತ್ರ ಸಲ್ಲಿಸುವರು’ ಎಂದು ಬಿಜೆಪಿ ವಾರಾಣಸಿ ನಗರ ಘಟಕದ ಅಧ್ಯಕ್ಷ ವಿದ್ಯಾಸಾಗರ್‌ ರಾಯ್ ಭಾನುವಾರ ಹೇಳಿದರು.

ವಾರಾಣಸಿ ಕ್ಷೇತ್ರದ ಮತದಾನ ಜೂನ್‌ 1 ರಂದು ನಡೆಯಲಿದೆ. ಕಾಂಗ್ರೆಸ್‌ ಪಕ್ಷವು ಇಲ್ಲಿ ತನ್ನ ರಾಜ್ಯ ಘಟಕದ ಅಧ್ಯಕ್ಷ ಅಜಯ್‌ ರಾಯ್‌ ಅವರನ್ನು ಸ್ಪರ್ಧೆಗಿಳಿಸಿದೆ. ಬಿಎಸ್‌ಪಿಯ ಅತ್ತರ್‌ ಜಮಾಲ್‌ ಅವರೂ ಕಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT