ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: 37ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಲಿರುವ ಪ್ರಧಾನಿ ಮೋದಿ

Published 26 ಅಕ್ಟೋಬರ್ 2023, 11:06 IST
Last Updated 26 ಅಕ್ಟೋಬರ್ 2023, 11:06 IST
ಅಕ್ಷರ ಗಾತ್ರ

ಪಣಜಿ: ಗೋವಾದ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಇಂದು (ಗುರುವಾರ) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

"ಇಂದು ಸಂಜೆ 37ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಲು ಗೋವಾಕ್ಕೆ ತೆರಳಲಿದ್ದೇನೆ. ಈ ಕ್ರೀಡಾಕೂಟ ಕ್ರೀಡಾಸ್ಫೂರ್ತಿ ಮತ್ತು ಏಕತೆಯನ್ನು ಬಲಪಡಿಸುತ್ತದೆ. ಜತೆಗೆ ರಾಷ್ಟ್ರದ ಎಲ್ಲ ಕ್ರೀಡಾಪಟುಗಳನ್ನು ಒಂದುಗೂಡಿಸುತ್ತದೆ. ಆಟಗಳು ‌ಪ್ರತಿಭೆ, ಕಠಿಣ ಪರಿಶ್ರಮ ಮತ್ತು ಕ್ರೀಡೆಯ ಮೇಲಿನ ಪ್ರೀತಿಯನ್ನು ಪ್ರತಿಬಿಂಬಿಸುತ್ತವೆ ಎಂದು ನನಗೆ ವಿಶ್ವಾಸವಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಕ್ರೀಡಾಕೂಟ: ಗೋವಾದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟ ಅ.26ರಿಂದ ಆರಂಭವಾಗಿ ನ.9ರವರೆಗೆ ನಡೆಯಲಿದೆ. ದೇಶದ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು 43 ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT