ನವದೆಹಲಿ: ಆರೂವರೆ ದಶಕದ ಬಳಿಕ ದೇಶದಲ್ಲಿ ನಡೆಯುತ್ತಿರುವ 32ನೇ ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು (ಐಸಿಎಇ) ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಲಿದ್ದಾರೆ.
ಇಂಟರ್‌ನ್ಯಾಷನಲ್ ಅಸೋಸಿಯೇಷನ್ ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ ಆಯೋಜಿಸಿರುವ ತ್ರೈವಾರ್ಷಿಕ ಸಮ್ಮೇಳನದ ವಿಷಯ ‘ಸುಸ್ಥಿರ ಕೃಷಿ ಆಹಾರ ವ್ಯವಸ್ಥೆಗಳತ್ತ ಪರಿವರ್ತನೆ’ ಎಂಬುದಾಗಿದೆ. ಆರು ದಿನಗಳ ಕಾಲ ಈ ಸಮ್ಮೇಳನ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
75 ದೇಶಗಳ ಒಂದು ಸಾವಿರ ಪ್ರತಿನಿಧಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.
ಹವಾಮಾನ ಬದಲಾವಣೆ ನೈಸರ್ಗಿಕ ಸಂಪನ್ಮೂಲಗಳ ಅವನತಿ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಹಿನ್ನೆಲೆಯಲ್ಲಿ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಇದು ಹೊಂದಿದೆ.