ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ ಯುವ ಉತ್ಸವಕ್ಕೆ ಇಂದು ಪ್ರಧಾನಿ ಚಾಲನೆ

Published 11 ಜನವರಿ 2024, 23:01 IST
Last Updated 11 ಜನವರಿ 2024, 23:01 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ 27ನೇ ರಾಷ್ಟ್ರೀಯ ಯುವ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಆ ಬಳಿಕ ರಾಜ್ಯದಲ್ಲಿ ₹30,500 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 

₹17,840 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ‘ಅಟಲ್ ಬಿಹಾರಿ ವಾಜಪೇಯಿ ಸೇವಾರಿ–ನ್ಹಾವ ಶೇವಾ ಅಟಲ್ ಸೇತು’ ಅನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆ ಯೋಜನೆಗೆ 2016ರಲ್ಲಿ ಮೋದಿ ಅವರು ಶಂಕು ಸ್ಥಾಪನೆ ನೆರವೇರಿಸಿದ್ದರು. 

ಆರೆಂಜ್ ಗೇಟ್ ಮತ್ತು ಮರೀನ್ ಡ್ರೈ ನಡುವೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದ ರಸ್ತೆಗೂ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. 9.2 ಕಿ.ಮೀ ವ್ಯಾಪ್ತಿಯ ಈ ಸುರಂಗ ಮಾರ್ಗದ ರಸ್ತೆಯನ್ನು ₹8,700 ಕೋಟಿಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಅಲ್ಲದೆ, ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT