ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ವಿಕಸಿತ್ ಭಾರತ್ @2047: ವಾಯ್ಸ್ ಆಫ್ ಯೂತ್‌'ಗೆ ನಾಳೆ ಪ್ರಧಾನಿ ಮೋದಿ ಚಾಲನೆ

Published 10 ಡಿಸೆಂಬರ್ 2023, 10:24 IST
Last Updated 10 ಡಿಸೆಂಬರ್ 2023, 10:24 IST
ಅಕ್ಷರ ಗಾತ್ರ

ನವದೆಹಲಿ: 'ವಿಕಸಿತ್ ಭಾರತ್ @2047: ವಾಯ್ಸ್ ಆಫ್ ಯೂತ್‌'ಗೆ ನಾಳೆ (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಚಾಲನೆ ನೀಡಲಿದ್ದಾರೆ.

ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಕುಲಪತಿಗಳು, ಸಂಸ್ಥೆಗಳ ಮುಖ್ಯಸ್ಥರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ದೇಶಕ್ಕಾಗಿ ರಾಷ್ಟ್ರೀಯ ಯೋಜನೆಗಳು, ಆದ್ಯತೆಗಳು ಮತ್ತು ಗುರಿಗಳ ರಚನೆಯಲ್ಲಿ ಯುವ ಪೀಳಿಗೆಯನ್ನು ಸಕ್ರಿಯವಾಗಿ ತೊಡಗಿಸುವುದು ಮೋದಿಯವರ ಉದ್ದೇಶವಾಗಿದೆ ಎಂದು ಪಿಎಂಒ ಹೇಳಿದೆ.

'ವಿಕಸಿತ್ ಭಾರತ್ @2047: ವಾಯ್ಸ್ ಆಫ್ ಯೂತ್‌' ಉಪಕ್ರಮವು ದೇಶದ ಯುವಕರಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ. ಅಲ್ಲದೆ, ಕಾರ್ಯಾಗಾರಗಳು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಯುವಕರನ್ನು ತೊಡಗಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ಪಿಎಂಒ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT