ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

Published 27 ಅಕ್ಟೋಬರ್ 2023, 8:53 IST
Last Updated 27 ಅಕ್ಟೋಬರ್ 2023, 8:53 IST
ಅಕ್ಷರ ಗಾತ್ರ

ಭೋಪಾಲ್‌: ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಚಿತ್ರಕೂಟಕ್ಕೆ ಭೇಟಿ ನೀಡಲಿದ್ದು, ಸದ್ಗುರು ಸೇವಾ ಸಂಘದ ಟ್ರಸ್ಟ್‌ನ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಚಿತ್ರಕೂಟಕ್ಕೆ ಆಗಮಿಸಲಿರುವ ಮೋದಿ, ರಘುಬೀರ್ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಶ್ರೀರಾಮ ಸಂಸ್ಕೃತ ಮಹಾವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ದಿವಂಗತ ಅರವಿಂದ ಭಾಯಿ ಮಫತ್‌ಲಾಲ್‌ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ, ಜಾಂಕಿಕುಂಡ್‌ ಚಿಕಿತ್ಸಾಲಯದ ನೂತನ ವಿಭಾಗವನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಿತ್ರಕೂಟದ ಪ್ರಮುಖ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಸಂಸ್ಥೆಯಾದ ತುಳಸಿ ಪೀಠಕ್ಕೂ ಮೋದಿ ಭೇಟಿ ನೀಡಲಿದ್ದಾರೆ. ಕಂಚ್‌ ಮಂದಿರದಲ್ಲಿ ಪೂಜೆ ಸಲ್ಲಿಸಿ, ತುಳಸಿ ಪೀಠದ ಜಗದ್ಗುರು ರಮಾನಂದಾಚಾರ್ಯರ ಆರ್ಶೀರ್ವಾದ ಪಡೆಯಲಿದ್ದಾರೆ. ಅಲ್ಲದೆ, ಪುಸ್ತಕ ಬಿಡುಗಡೆಯ ಸಾರ್ವಜನಿಕ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT