ಚಂದ್ರಪುರ: ಕಾಂಗ್ರೆಸ್ ಪಕ್ಷವನ್ನು ಹಾಗಲಕಾಯಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ತುಪ್ಪದ ಜತೆ ಹುರಿದರೂ ಅಥವಾ ಸಕ್ಕರೆ ಜತೆ ಬೆರೆಸಿದರೂ ಅದರ ರುಚಿ ಬದಲಾಗುವುದಿಲ್ಲ, ಅದೇ ರೀತಿ ಕಾಂಗ್ರೆಸ್ ಪಕ್ಷವು ದೇಶದ ಎಲ್ಲ ಸಮಸ್ಯೆಗಳ ಮೂಲವಾಗಿದೆ ಎಂದು ಪ್ರತಿಪಾದಿಸಿದರು.

ಮಹಾರಾಷ್ಟ್ರದಲ್ಲಿ ಸೋಮವಾರ ತಮ್ಮ ಮೊದಲ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ, ‘ದೇಶದ ಎಲ್ಲ ಸಮಸ್ಯೆಗಳಿಗೂ ಕಾಂಗ್ರೆಸ್ ಕಾರಣ. ಧರ್ಮದ ಆಧಾರದ ಮೇಲೆ ದೇಶ ವಿಭಜನೆಯಾಗಲು ಯಾರು ಕಾರಣ? ಕಾಶ್ಮೀರ, ನಕ್ಸಲಿಸಂ..? ರಾಮ ಮಂದಿರ ನಿರ್ಮಾಣವನ್ನು ವಿರೋಧಿಸಿದ್ದು ಮತ್ತು ರಾಮನ ಅಸ್ತಿತ್ವವನ್ನು ಪ್ರಶ್ನಿಸಿದ್ದು ಯಾರು? ರಾಮ ಮಂದಿರದ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದರು ಯಾರು?’ ಎಂದು ಅವರು ಚಂದ್ರಪುರದಲ್ಲಿ ನೆರೆದಿದ್ದ ಜನರನ್ನು ಪ್ರಶ್ನಿಸಿದರು.

‘ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ಅಧಿಕಾರದಿಂದ ಹೊರಗಿದ್ದು, ದೇಶದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ನಮಗೆ ಸಾಧ್ಯವಾಗಿದೆ’ ಎಂದು ಹೇಳಿದ ಮೋದಿ, ಚಂದ್ರಪುರದ ಕಟ್ಟಿಗೆಯನ್ನು ಅಯೋಧ್ಯೆಯ ರಾಮಮಂದಿರ ನಿರ್ಮಾಣ ಮತ್ತು ದೆಹಲಿಯ ಸಂಸತ್ ಭವನದ ನಿರ್ಮಾಣಕ್ಕೆ ಬಳಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.